ಜಮ್ಮು-ಕಾಶ್ಮೀರ: ಸ್ಮಶಾನ ತಲುಪಿದಾಗ ಬದುಕಿ ಬಂದ ಶಿಶು!
Team Udayavani, May 24, 2022, 10:26 PM IST
ಸಾಂದರ್ಭಿಕ ಚಿತ್ರ.
ಶ್ರೀನಗರ: ಬದುಕಿಲ್ಲ ಎಂದು ಆಸ್ಪತ್ರೆಯವರು ಹೇಳಿದ್ದನ್ನು ಕೇಳಿ ದಫನ ಮಾಡಲು ಸ್ಮಶಾನಕ್ಕೆ ಕರೆದೊಯ್ಯಲಾಗಿದ್ದ ಶಿಶುವೊಂದು ಬದುಕಿಬಂದಿರುವ ಘಟನೆ ಜಮ್ಮು-ಕಾಶ್ಮೀರದ ರಾಂಬನ್‌ನ ಬನಿಹಾಲ್‌ನಲ್ಲಿ ನಡೆದಿದೆ.
ಬಶರತ್ ಅಹ್ಮದ್ ಅವರ ಪತ್ನಿ ಸೋಮವಾರ ಬನಿಹಾಲ್‌ನ ಆಸ್ಪತ್ರೆಯಲ್ಲಿ ನವಜಾತ ಶಿಶುವಿಗೆ ಜನ್ಮ ನೀಡಿದ್ದಾರೆ. ಆದರೆ ಶಿಶು ಹುಟ್ಟುವಾಗಲೇ ಸಾವನ್ನಪ್ಪಿದ್ದಾಗಿ ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದಾರೆ.
ಅಂತ್ಯಸಂಸ್ಕಾರಕ್ಕೆಂದು ಶಿಶುವನ್ನು ಸ್ಮಶಾನಕ್ಕೆ ಹೊತ್ತೂಯ್ದಾಗ ಶಿಶು ಉಸಿರಾಡುತ್ತಿರುವುದು ಕಂಡುಬಂದಿದೆ. ತಕ್ಷಣ ವಾಪಸು ಆಸ್ಪತ್ರೆಗೆ ಕರೆತರಲಾಗಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಶ್ರೀನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬದುಕಿರುವ ಮಗುವನ್ನು ಸತ್ತಿದೆಯೆಂದು ಹೇಳಿದ ಆಸ್ಪತ್ರೆಯ ವಿರುದ್ಧ ಸಂಬಂಧಿಕರು ಹೋರಾಟ ನಡೆಸಿದ್ದಾರೆ. ಇಬ್ಬರು ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ಪುತ್ತೂರು : ಜಾತಿ ನಿಂದನೆ, ಹಲ್ಲೆ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ರೈಲ್ನಲ್ಲಿ ಕಾಸರಗೋಡಿನ ಮಹಿಳೆಯ ಬ್ಯಾಗ್ ಕಸಿದು ಪರಾರಿ; ದೂರು
ರಾಜ್ಯದಲ್ಲಿ 67 ಕೋಟಿ ರೂ. ಮೌಲ್ಯದ ಮಾದಕವಸ್ತು ನಾಶ
ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್ ಪದಾರ್ಪಣೆ
ವಿಂಬಲ್ಡನ್ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿ: ವೀನಸ್ ದಾಖಲೆ ಮುರಿಯುವತ್ತ ಸ್ವಿಯಾಟೆಕ್