ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ ಕುಸಿತ
Team Udayavani, Oct 10, 2019, 8:30 PM IST
ಮುಂಬೈ: ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಲಭ್ಯವಿರುವ ಉದ್ಯೋಗ ಪ್ರಮಾಣದ ಮಟ್ಟ ಇಳಿಕೆಯಾಗಿದೆ ಎಂದು ಕಂಪನಿಗಳ ಕಾರ್ಯಪಡೆಯ ವಿಶ್ಲೇಷಣಾ ವರದಿ ತಿಳಿಸಿದೆ.
2019ರ ಹಣಕಾಸು ವರ್ಷದಲ್ಲಿ ಖಾಸಗಿ ವಲಯದಲ್ಲಿ ಶೇ.9.2ರಷ್ಟು ಉದ್ಯೋಗ ಹೆಚ್ಚಳ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಮಾತ್ರ ಶೇ.2.6ರಷ್ಟು ಪ್ರಮಾಣದಲ್ಲಿ ಕುಸಿತ ಕಂಡಿದೆ ಎಂದು ವರದಿ ಉಲ್ಲೇಖೀಸಿದೆ.
ಇನ್ನೂ ಸಮೀಕ್ಷೆಯಲ್ಲಿ ಉದ್ಯೋಗದಾತ ಸಂಸ್ಥೆಗಳಾದ ಕೋಲ್ ಇಂಡಿಯಾ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ನಿವ್ವಳ ದರದ ಆಧಾರದ ಮೇಲೆ ಉದ್ಯೋಗ ಕಡಿತಗೊಳಿಸಿದ್ದು, ಉದ್ಯೋಗ ಅವಕಾಶದಲ್ಲಿ ಕ್ರಮವಾಗಿ ಶೇ 4.4ರಷ್ಟು ಹಾಗೂ ಶೇ 2.6ರಷ್ಟು ಕಡಿತವಾಗಿದೆ.
ದಿನದಿಂದ ದಿನಕ್ಕೆ ಸಾರ್ವಜನಿಕ ವಲಯದ ಕಂಪನಿಗಳ ಪ್ರಾಮುಖ್ಯತೆಯು ಕುಗ್ಗುತ್ತಿದ್ದು, ಉದ್ಯೋಗಾವಕಾಗಳು ಕಡಿಮೆಯಾಗುತ್ತಿವೆ. 2007ರ ವಿತ್ತೀಯ ವರ್ಷದಲ್ಲಿ ಪಟ್ಟಿ ಮಾಡಲಾದ ಒಟ್ಟು ಸಂಸ್ಥೆಗಳಲ್ಲಿ ಶೇ.50ರಷ್ಟು ಉದ್ಯೋಗ ಅವಕಾಶಗಳಿದ್ದು, ಅದರ ಮಟ್ಟ ಇದೀಗ ಶೇ.25ಕ್ಕೆ ತಲುಪಿದೆ ಎಂದು ವಿದೇಶಿ ದಲ್ಲಾಳಿ ಸಂಸ್ಥೆ ಕ್ರೆಡಿಟ್ ಲಿಯೊನೈಸ್ ಸೆಕ್ಯುರಿಟೀಸ್ ಏಷ್ಯಾ (ಸಿಎಲ್ಎಸ್ಎ) ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ