ಲೋಕಪಾಲ ನೇಮಕಾತಿ ವಿಳಂಬ ಅಸಮರ್ಥನೀಯ ಕೇಂದ್ರಕ್ಕೆ ಸುಪ್ರೀಂ

Team Udayavani, Apr 27, 2017, 11:59 AM IST

Supreme Court-700.jpg

ಹೊಸದಿಲ್ಲಿ : ಭ್ರಷ್ಟಾಚಾರ ನಿಗ್ರಹಿಸುವ ಲೋಕಪಾಲ ರಚನೆಯನ್ನು ವಿಳಂಬಿಸುವುದು ಎಷ್ಟು ಮಾತ್ರಕ್ಕೂ ಸಮರ್ಥನೀಯವಲ್ಲ ಎಂದು ಸುಪ್ರೀಂ ಕೋರ್ಟ್‌ ಕೇಂದ್ರ ಸರಕಾರಕ್ಕೆ ಖಡಕ್‌ ಆಗಿ ಹೇಳಿದೆ.

ಲೋಕಪಾಲ ರಚನೆಯು ಈಗಾಗಲೇ ಮೂರು ವರ್ಷದಿಂದ ನನೆಗುದಿಗೆ ಬಿದ್ದಿದೆ ಎಂಬ ಅರ್ಜಿಯ ಮೇಲಿನ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌  ಕೇಂದ್ರ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

ಲೋಕಪಾಲ ಸ್ಥಾಪನೆಗೆ ಅವಕಾಶ ಕಲ್ಪಿಸುವ ಕಾನೂನನ್ನು 2013ರಲ್ಲೇ ಸಂಸತ್ತಿನಲ್ಲಿ ಪಾಸು ಮಾಡಲಾಗಿತ್ತು. ಅಣ್ಣಾ ಹಜಾರೆ ನೇತೃತ್ವದಲ್ಲಿ, ಅರವಿಂದ ಕೇಜ್ರಿವಾಲ್‌ ಮತ್ತು ಪ್ರಶಾಂತ್‌ ಭೂಷಣ್‌ ಮತ್ತಿತ್ತರ ಭಾರೀ ಹೋರಾಟದ ಬಳಿಕ ಒಂದು ವರ್ಷದ ತರುವಾಯ ಲೋಕಪಾಲ ಮಸೂದೆಯನ್ನು ಕಾಯಿದೆಯಾಗಿ ಜಾರಿಗೆ ತರಲಾಗಿತ್ತು. 

ಕಳೆದ ತಿಂಗಳಲ್ಲಿ ಕೇಂದ್ರ ಸರಕಾರ, ಸುಪ್ರೀಂ ಕೋರ್ಟಿಗೆ, “ಲೋಕಪಾಲ ನೇಮಕಾತಿಯನ್ನು ಈ ಕ್ಷಣಕ್ಕೇ ಮಾಡಲಾಗದು. ಏಕೆಂದರೆ ಆ ಕುರಿತ ಸಮಿತಿಯೊಂದಕ್ಕೆ ಕೆಲವೊಂದು ಬಹುಮುಖ್ಯ ಬದಲಾವಣೆಗಳನ್ನು ತರಬೇಕಿದೆ ಮತ್ತು ಆ ಸಮಿತಿಗೆ ನೇಮಿಸಲಾಗುವ ಸದಸ್ಯರ ಹೆಸರನ್ನು ಸಂಸತ್ತು ಅನುಮೋದಿಸಬೇಕಾಗಿದೆ’ ಎಂದು ಹೇಳಿತ್ತು. 

ಅವಶ್ಯವಿರುವ ಮಹತ್ತರ ಬದಲಾವಣೆಯ ಪ್ರಕಾರ ವಿರೋಧ ಪಕ್ಷ ನಾಯಕನ ಹುದ್ದೆಯ ಮರು ವ್ಯಾಖ್ಯಾನ ಮಾಡಬೇಕಾಗಿದೆ ಮತ್ತು ಲೋಕಸಭೆಯಲ್ಲಿನ ಬೃಹತ್‌ ವಿರೋಧ ಪಕ್ಷದ ನಾಯಕನನ್ನು ಲೋಕಪಾಲ ಆಯ್ಕೆಯ ಮಂಡಳಿಯಲ್ಲಿ ಸೇರಿಸಿಕೊಳ್ಳಬೇಕಾಗಿದೆ ಎಂದು ಕೇಂದ್ರ ಸರಕಾರ ಹೇಳಿತ್ತು. 

2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ವಿರೋಧ ಪಕ್ಷ ನಾಯಕನಾಗಲು ಅರ್ಹವಿರುವಷ್ಟು ಸ್ಥಾನಗಳನ್ನು ಜಯಿಸಿರಲಿಲ್ಲ; ಹಾಗಾಗಿ ವಿರೋಧ ಪಕ್ಷ ನಾಯಕನ ಹುದ್ದೆಯ ಮರು ವ್ಯಾಖ್ಯಾನ ಅಗತ್ಯವಾಗಿತ್ತು ಮತ್ತು ಈ ಕುರಿತ ಬದಲಾವಣೆಗೆ ಸಂಸತ್ತಿನ ಅನುಮೋದನೆ ಅಗತ್ಯವಿತ್ತು ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ಹೇಳಿದೆ. 

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.