ದಿಲ್ಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಮನೆ ಲೂಟಿ; ನಾಲ್ವರ ಸೆರೆ
Team Udayavani, May 1, 2017, 10:47 AM IST
ಹೊಸದಿಲ್ಲಿ : ಭಾರತೀಯ ಜನತಾ ಪಕ್ಷದ ಸಂಸದ ಮನೋಜ್ ತಿವಾರಿ ಅವರ ಮನೆಗೆ ಭಾನುವಾರ ರಾತ್ರಿ ಯಾರೋ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ಮನೆಯನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ.
ಮನೆಯ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾಗ ದಿಲ್ಲಿ BJP ಘಟಕದ ಅಧ್ಯಕ್ಷರೂ ಆಗಿರುವ ಮನೋಜ್ ತಿವಾರಿ ಅವರು ಮನೆಯಲ್ಲಿ ಇರಲಿಲ್ಲ.
ಸುಮಾರು ಎಂಟರಿಂದ ಹತ್ತು ಮಂದಿ ದುಷ್ಕರ್ಮಿಗಳು ತಮ್ಮ ಮನೆಯ ಮೇಲೆ ದಾಳಿ ಮಾಡಿದ್ದಾರೆ ಎಂದು ತಿವಾರಿ ಅವರು ಟ್ವೀಟ್ ಮಾಡಿದ್ದಾರೆ.
‘ನನ್ನ ಮನೆಯ ಮೇಲೆ ನಡೆದಿರುವ ದಾಳಿಯು ನನ್ನನ್ನು ಕೊಲ್ಲುವ ಉದ್ದೇಶದ್ದಾಗಿದೆ. ಮನೆಯಲ್ಲಿದ್ದ ಇಬ್ಬರು ಕಚೇರಿ ಸಿಬಂದಿಗಳ ಮೇಲೆ ಹಲ್ಲೆ ನಡೆಸಿ ಅವರನ್ನು ಗಾಯಗೊಳಿಸಲಾಗಿದೆ’ ಎಂದು ತಿವಾರಿ ಹೇಳಿದ್ದಾರೆ.
ತಿವಾರಿ ಅವರ ಮನೆ ಮೇಲಿನ ದಾಳಿಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿಮಾಡಿದೆ.
ದಾಳಿಕೋರರಿಗೆ ಪೊಲೀಸರ ಯಾವುದೇ ಹೆದರಿಕೆ ಇದ್ದಂತೆ ಕಂಡುಬರಲಿಲ್ಲ; ಅವರು ತಮ್ಮ ದಾಳಿಯ ವೇಳೆ ಬೈಗುಳ ಮಳೆಯನ್ನೇ ಸುರಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಯೋರ್ವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ