ಹಿಜ್ಬುಲ್ನ ನಾಲ್ವರು ಉಗ್ರರಿಗೆ ಜೈಲು ಶಿಕ್ಷೆ
Team Udayavani, Oct 26, 2021, 5:37 AM IST
ಹೊಸದಿಲ್ಲಿ: ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಇಬ್ಬರು ಉಗ್ರರಿಗೆ 12 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ.
ಇದರ ಜತೆಗೆ ಇದೇ ಸಂಘಟನೆಯ ಮತ್ತಿಬ್ಬರು ಸದಸ್ಯರಿಗೆ 10 ವರ್ಷ ಜೈಲು ಶಿಕ್ಷೆಯನ್ನು ಹೊಸದಿಲ್ಲಿಯ ಸ್ಥಳೀಯ ಕೋರ್ಟ್ ಸೋಮವಾರ ವಿಧಿಸಿದೆ.
ದೇಶದಲ್ಲಿ ಉಗ್ರ ಕೃತ್ಯಗಳನ್ನು ಎಸಗಲು ಅನುಕೂಲವಾಗುವಂತೆ ನೆರೆಯ ದೇಶಗಳಿಂದ ವಿತ್ತೀಯ ನೆರವು ಪಡೆಯುತ್ತಿದ್ದರು ಎಂದು ಎನ್ಐಎ ಆರೋಪಿಸಿ, ತನಿಖೆ ನಡೆಸಿತ್ತು. ಅವರ ವಿರುದ್ಧ ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆಯ ಅನ್ವಯ ಕೇಸು ದಾಖಲಿಸಲಾಗಿದೆ.
ಬಂಧನ: ಇದೇ ವೇಳೆ ಬೇಹುಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಗುಜರಾತ್ನ ಎಟಿಎಸ್ ವ್ಯಕ್ತಿಯನ್ನು ಬಂಧಿಸಿದೆ. ಆತ ಬಿಎಸ್ಎಫ್ಗಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. 2012ರಲ್ಲಿ ಸೇರಿದ್ದ ಆತ ದೇಶದ ರಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ಥಾನಕ್ಕೆ ವಾಟ್ಸ್ಆ್ಯಪ್ ಮೂಲಕ ಕಳುಹಿಸುತ್ತಿದ್ದ. ಆತನ ಬಳಿಯಿಂದ 2 ಫೋನ್ಗಳನ್ನೂ ವಶ ಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ