
ಕರಾಚಿ ಏರ್ಪೋರ್ಟ್ ನಲ್ಲಿ ತುರ್ತು ಲ್ಯಾಂಡಾದ ದೆಹಲಿ- ದೋಹಾ ವಿಮಾನ
Team Udayavani, Mar 13, 2023, 12:38 PM IST

ಹೊಸದಿಲ್ಲಿ: ದೆಹಲಿ-ದೋಹಾ ಇಂಡಿಗೋ ವಿಮಾನವು ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್ ಆದ ಘಟನೆ ನಡೆದಿದೆ. ಪ್ರಯಾಣಿಕರೊಬ್ಬರು ಅಸ್ವಸ್ಥರಾದ ಕಾರಣ ವೈದ್ಯಕೀಯ ನೆರವಿಗಾಗಿ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು.
ಮೂಲಗಳ ಪ್ರಕಾರ, ಭಾನುವಾರ ರಾತ್ರಿ 10.17ಕ್ಕೆ ದೋಹಾಗೆ ತೆರಳುವ ವಿಮಾನ ದೆಹಲಿಯಿಂದ ಹೊರಟಿತ್ತು. ಇಂಡಿಗೋ ಫ್ಲೈಟ್ 6E-1736 ನಲ್ಲಿ ವೈದ್ಯಕೀಯ ತುರ್ತುಪರಿಸ್ಥಿತಿಯಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿರುವ ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿತ್ತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
“ದುರದೃಷ್ಟವಶಾತ್, ಅಸ್ವಸ್ಥ ಪ್ರಯಾಣಿಕ ಅಸುನೀಗಿದ್ದಾರೆ ಎಂದು ವಿಮಾನ ನಿಲ್ದಾಣ ವೈದ್ಯಕೀಯ ತಂಡವು ದೃಡಪಡಿಸಿತು” ಎಂದು ಸಂಸ್ಥೆ ತಿಳಿಸಿದೆ.
ಇದನ್ನೂ ಓದಿ:ತಮ್ಮ ಮೊಬೈಲ್ ಕರೆ ಮಾಹಿತಿ ಅನ್ಯರಿಗೆ ನೀಡದಂತೆ ಎಂ.ಬಿ.ಪಾಟೀಲ್ ಆಕ್ಷೇಪಣೆ ಸಲ್ಲಿಕೆ
ಸಂಬಂಧಿತ ಅಧಿಕಾರಿಗಳೊಂದಿಗೆ ಸಮನ್ವಯತೆಯೊಂದಿಗೆ ಇತರ ಪ್ರಯಾಣಿಕರನ್ನು ವಿಮಾನದಲ್ಲಿ ವರ್ಗಾಯಿಸಲು ವ್ಯವಸ್ಥೆ ಮಾಡುತ್ತಿದೆ ಎಂದು ಏರ್ ಲೈನ್ ಹೇಳಿಕೆಯಲ್ಲಿ ತಿಳಿಸಿದೆ.
Doha bound IndiGo flight diverted to Pakistan’s Karachi due to a medical emergency onboard, says an airline official to ANI. pic.twitter.com/KuVJoIJmwm
— ANI (@ANI) March 13, 2023
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court 75ರ ವ್ಯಕ್ತಿಗೆ 40 ವರ್ಷದ ಬಳಿಕ ಜಾಮೀನು!

Rajasthan Election; ಬಿಜೆಪಿ ಸಂಸದ ರಮೇಶ್ ಬಿಧುರಿಗೆ ಚುನಾವಣಾ ಜವಾಬ್ದಾರಿ

Kashmir; ಈ ವರ್ಷ ಜಂಟಿ ಕಾರ್ಯಾಚರಣೆಯಲ್ಲಿ 31 ಭಯೋತ್ಪಾದಕರ ಅಂತ್ಯ

Thane ನಕಲಿ ಕರೆನ್ಸಿ ಪ್ರಕರಣ; ಉಗ್ರ’ಅಂಕಲ್’ಸೇರಿ ನಾಲ್ವರ ವಿರುದ್ಧ ಎನ್ಐಎ ಚಾರ್ಜ್ ಶೀಟ್

Miracle: ಈ ರೋಗಿಯ ಹೊಟ್ಟೆಯಲ್ಲಿತ್ತು ನಟ್, ಬೋಲ್ಟ್ ಸೇರಿ 15 ಕ್ಕೂ ಹೆಚ್ಚು ವಸ್ತುಗಳು…