ಅಕ್ರಮ ಹಣ ವರ್ಗಾವಣೆ ಪ್ರಕರಣ: ಎನ್‌ಎಸ್‌ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣಗೆ ಜಾಮೀನು ಮಂಜೂರು

Team Udayavani, Feb 9, 2023, 12:20 PM IST

ಅಕ್ರಮ ಹಣ ವರ್ಗಾವಣೆ ಪ್ರಕರಣ: ಎನ್‌ಎಸ್‌ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣಗೆ ಜಾಮೀನು ಮಂಜೂರು

ಹೊಸದಿಲ್ಲಿ: ಎನ್‌ ಎಸ್‌ ಇ ಉದ್ಯೋಗಿಗಳ ಅಕ್ರಮ ಫೋನ್ ಟ್ಯಾಪಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರಿಗೆ ದೆಹಲಿ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ. ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಈಗಾಗಲೇ ಆಕೆಗೆ ಜಾಮೀನು ನೀಡಿತ್ತು.

ಐಸೆಕ್ – ಸೈಬರ್ ಸೆಕ್ಯುರಿಟಿ ಸಂಸ್ಥೆಯು ಎನ್‌ಎಸ್‌ಇ ಉದ್ಯೋಗಿಗಳ ಫೋನ್‌ಗಳನ್ನು ಅಕ್ರಮವಾಗಿ ಟ್ಯಾಪ್ ಮಾಡುವ ಮೂಲಕ 4.54 ಕೋಟಿ ರೂಪಾಯಿ ಗಳಿಸಿದ್ದಾರೆ ಎಂದು ಈ ಹಿಂದೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ನಿರಾಕರಿಸುವ ಸಂದರ್ಭದಲ್ಲಿ, ದೆಹಲಿ ಹೈಕೋರ್ಟ್ ನ್ಯಾಯಾಧೀಶರು ಹೇಳಿದ್ದರು. ಸೈಬರ್ ದೋಷಗಳ ಅಧ್ಯಯನದ ನೆಪದಲ್ಲಿ ಸಂಸ್ಥೆಯು ಎನ್‌ಎಸ್‌ಇ ಉದ್ಯೋಗಿಗಳ ಫೋನ್ ಕರೆಗಳನ್ನು ಅಕ್ರಮವಾಗಿ ತಡೆಹಿಡಿಯುತ್ತಿತ್ತು.

ಕಾನೂನುಬಾಹಿರ ಚಟುವಟಿಕೆಯಿಂದ ಹಣ ಗಳಿಸಲು ಐಸೆಕ್ ಗೆ ಅವಕಾಶ ನೀಡುವ ಮೂಲಕ ಎನ್‌ಎಸ್‌ಇ ಗೆ ವಿತ್ತೀಯ ನಷ್ಟ ಉಂಟಾಗಿದೆ ಎಂದು ನ್ಯಾಯಾಧೀಶರು ಹೇಳಿದರು. ಎನ್‌ಎಸ್‌ಇ ಅಧಿಕಾರಿಗಳು ಮತ್ತು ಐಸೆಕ್ ನಡುವೆ ಒಪ್ಪಂದ ಅಂತಿಮಗೊಳಿಸಿದಾಗ, ಖಾಸಗಿ ಸಂಸ್ಥೆಯನ್ನು ಮಾಜಿ ಮುಂಬೈ ಪೊಲೀಸ್ ಕಮಿಷನರ್ ಸಂಜಯ್ ಪಾಂಡೆ ಪ್ರತಿನಿಧಿಸಿದ್ದರು.

ಮಾಜಿ ಎನ್‌ಎಸ್‌ಇ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ ಮತ್ತು ರವಿ ನಾರಾಯಣ್ ಅವರು ಉದ್ಯೋಗಿಗಳು ಚರ್ಚೆ ನಡೆಸುತ್ತಿದ್ದಾರೆಯೇ ಅಥವಾ ವಿನಿಮಯ ಸಂಬಂಧಿತ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದಾರೆಯೇ ಎಂದು ಕಂಡುಹಿಡಿಯಲು ಬಯಸಿದ್ದರು ಎಂದು ಸಿಬಿಐ ಶಂಕಿಸಿದೆ.

ಇದನ್ನೂ ಓದಿ:ಎರಡು ವರ್ಷದ ಬಳಿಕ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ ಎಂ.ಎಸ್.ಧೋನಿ

ಚಿತ್ರಾ ರಾಮಕೃಷ್ಣ ಅವರನ್ನು 2022ರ ಮಾರ್ಚ್ ನಲ್ಲಿ ಸಿಬಿಐ ಬಂಧಿಸಿತು. ನ್ಯಾಯಾಲಯವು ಆಕೆಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ದೆಹಲಿಯಲ್ಲಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಅವರು 2013 ಮತ್ತು 2016 ರ ನಡುವೆ ಎನ್ಎಸ್ಇ ನ ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದರು.

ಟಾಪ್ ನ್ಯೂಸ್

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1a-wasa

ವಿಜಯಪುರ: ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ 6 ಲಕ್ಷ ರೂ.,480 ಗ್ರಾಂ ಚಿನ್ನ ವಶ

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-sadsasd

ಹುಣಸೂರು: ರೌಡಿ ಶೀಟರ್ ತನ್ವೀರ್ ಬೇಗ್ ಗಡಿಪಾರು