
ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರೂ ಮಾಸ್ಕ್ ಕಡ್ಡಾಯ: ದೆಹಲಿ ಹೈಕೋರ್ಟ್
ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಎಲ್ಲಾ ನಾಲ್ಕು ಮೇಲ್ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
Team Udayavani, Apr 7, 2021, 11:43 AM IST

ನವದೆಹಲಿ: ಒಂದು ವೇಳೆ ಸ್ವಂತ ವಾಹನದಲ್ಲಿ ಒಬ್ಬರೇ ಕಾರನ್ನು ಚಲಾಯಿಸಿಕೊಂಡು ಹೋಗುವ ಸಂದರ್ಭದಲ್ಲಿಯೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ದೆಹಲಿ ಹೈಕೋರ್ಟ್ ಬುಧವಾರ(ಏಪ್ರಿಲ್ 07) ಆದೇಶ ನೀಡಿದೆ.
ಕೋವಿಡ 19 ಸೋಂಕು ಹರಡದಂತೆ ಮಾಸ್ಕ್ “ಸುರಕ್ಷಾ ಕವಚ”ದಂತೆ ಕಾರ್ಯನಿರ್ವಹಿಸಲಿದೆ ಎಂದು ಹೈಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿದೆ. ಕೋವಿಡ್ ಸೋಂಕು ಇರುವ ಸಂದರ್ಭದಲ್ಲಿ ಖಾಸಗಿ ವಾಹನದಲ್ಲಿ ಒಬ್ಬರೇ ಕಾರಿನಲ್ಲಿ ಪ್ರಯಾಣಿಸುವಾಗಲೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೈಕೋರ್ಟ್ ಪೀಠ ಹೇಳಿದೆ.
ಸ್ವಂತ ವಾಹನದಲ್ಲಿ ಒಬ್ಬರೇ ಪ್ರಯಾಣಿಸುವಾಗ ಮಾಸ್ಕ್ ಧರಿಸದೇ ಇದ್ದವರಿಗೆ ದಂಡ ವಿಧಿಸುವ ದೆಹಲಿ ಸರ್ಕಾರದ ನಿರ್ಧಾರದ ಬಗ್ಗೆ ಮಧ್ಯಪ್ರವೇಶಿಸಲು ಜಸ್ಟೀಸ್ ಪ್ರತಿಭಾ ಎಂ ಸಿಂಗ್ ನೇತೃತ್ವದ ಹೈಕೋರ್ಟ್ ಪೀಠ ನಿರಾಕರಿಸಿದೆ.
ಸ್ವಂತ ಕಾರಿನಲ್ಲಿ ಮಾಸ್ಕ್ ಧರಿಸದೇ ಪ್ರಯಾಣಿಸುತ್ತಿದ್ದ ನಾಲ್ವರಿಗೆ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಎಲ್ಲಾ ನಾಲ್ಕು ಮೇಲ್ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಕಾರಿನಲ್ಲಿ ಇರುವ ಒಂದು ಸೀಟಿನಲ್ಲಿ ಕುಳಿತುಕೊಂಡರೂ ಕೂಡಾ ಅದು ಸಾರ್ವಜನಿಕ ಸ್ಥಳ ಎಂದೇ ಪರಿಗಣಿಸಲಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Madhya Pradesh: ಭೋಪಾಲ್ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ

Women’s Reservation Bill ಮೂಲಕ ‘ಶಕ್ತಿ’ಯನ್ನು ಪೂಜಿಸುವ ಭಾವನೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ