ಕೋವಿಡ್ 19: ಲಾಕ್ ಡೌನ್ ಆದೇಶ ಪಾಲಿಸಲ್ಲ ಎಂದು ತಂದೆ ವಿರುದ್ಧ ದೂರು ಕೊಟ್ಟ ಮಗ!
ನನ್ನ ತಂದೆ ಲಾಕ್ ಡೌನ್ ಆದೇಶ ಪಾಲಿಸದೇ ಈ ಪ್ರದೇಶದಲ್ಲಿ ಓಡಾಡುತ್ತಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದ.
Team Udayavani, Apr 3, 2020, 7:02 PM IST
Representative Image
ನವದೆಹಲಿ:ಲಾಕ್ ಡೌನ್ ಆದೇಶವನ್ನು ಗಾಳಿಗೆ ತೂರಿ ನನ್ನ ತಂದೆ ಹೊರಗಡೆ ತಿರುಗಾಡುತ್ತಿದ್ದಾರೆ ಎಂದು ಸ್ವತಃ ಮಗನೇ ತಂದೆ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಘಟನೆ ನೈರುತ್ಯ ದೆಹಲಿಯ ವಸಂತ್ ಕುಂಜ್ ನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ವಸಂತ್ ಕುಂಜ್ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅಭಿಷೇಕ್ (30) ಎಂಬ ಯುವಕ ತಂದೆ ವಿರೇಂದ್ರ ಸಿಂಗ್ (59ವರ್ಷ) ವಿರುದ್ಧ ದೂರು ನೀಡಿದ್ದ. ನನ್ನ ತಂದೆ ಲಾಕ್ ಡೌನ್ ಆದೇಶ ಪಾಲಿಸದೇ ಈ ಪ್ರದೇಶದಲ್ಲಿ ಓಡಾಡುತ್ತಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಅಭಿಷೇಕ್ ರಾಜೋಕಾರಿ ಪ್ರದೇಶದಲ್ಲಿ ವಾಸಿಸುತ್ತಿದ್ದು, ಆಟೋಮೊಬೈಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದಾನೆ. ಕೋವಿಡ್ 19 ಮಾರಣಾಂತಿಕ ವೈರಸ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ್ದರು.
ಕೋವಿಡ್ 19 ವೈರಸ್ ಭಾರತದಲ್ಲಿ ಈಗಾಗಲೇ ಕ್ಷಿಪ್ರವಾಗಿ ಹಬ್ಬುತ್ತಿದ್ದು, 50ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 2000 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋವಾದಲ್ಲಿ ಕ್ರೈಸ್ತ ಪಾದ್ರಿ ಬಂಧನ : ಮತಾಂತರ ಸಹಿಸುವುದಿಲ್ಲ ಎಂದ ಸಿಎಂ ಸಾವಂತ್
ರಾಜ್ಯಗಳ ಅಭಿವೃದ್ಧಿಯಾಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ: ಉಪರಾಷ್ಟ್ರಪತಿ ನಾಯ್ಡು
ಆನ್ಲೈನ್ನಲ್ಲಿ ಪ್ರೀತಿ, ಮದುವೆ : 12 ಲಕ್ಷ ರೂ ವಂಚಿಸಿದ ಮೂರು ಮಕ್ಕಳ ತಾಯಿ
ಮಿಜೋರಾಂ: ವಿದೇಶಕ್ಕೆ ಕಳ್ಳಸಾಗಾಣಿಕೆಯಾಗುತ್ತಿದ್ದ 468 ವನ್ಯಜೀವಿಗಳ ರಕ್ಷಣೆ
ಮಹಾರಾಷ್ಟ್ರದಲ್ಲಿ ಬಿ.ಎ.4 ಮತ್ತು ಬಿ.ಎ.5 ಒಮಿಕ್ರಾನ್ ರೂಪಾಂತರಿ ಪತ್ತೆ