Delhi: ಪೊಲೀಸ್ ಎಂದು ಬೆದರಿಸಿ ಅಪಾರ್ಟ್ಮೆಂಟ್ ಮೆಟ್ಟಿಲಲ್ಲೇ ಅತ್ಯಾಚಾರವೆಸಗಿದ ವ್ಯಕ್ತಿ
Team Udayavani, Jul 13, 2023, 11:27 AM IST
ದೆಹಲಿ: ಪೊಲೀಸ್ ಎಂದು ಯುವತಿಯನ್ನು ಬೆದರಿಸಿ ಆಕೆ ಮೇಲೆ ಅತ್ಯಾಚಾರವೆಸಗಿರುವ ವ್ಯಕ್ತಿಯನ್ನು ಗುರುವಾರ (ಜು.12 ರಂದು) ಬಂಧಿಸಲಾಗಿದೆ.
ಘಟನೆ ಹಿನ್ನೆಲೆ: ಜು.7 ರ ತಡರಾತ್ರಿ ಯುವತಿ ತನ್ನ ಪ್ರಿಯಕರನ ಜೊತೆ ಕಾರಿನಲ್ಲಿ ಕೂತು ಮಾತನಾಡುತ್ತಿದ್ದಳು. ಈ ವೇಳೆ ಕಾರಿನ ಕನ್ನಡಿಯಲ್ಲಿ ಕಾಣುತ್ತಿದ್ದ ಇಬ್ಬರ ಮುಖದ ಫೋಟೋ ಹಾಗೂ ವಿಡಿಯೋವನ್ನು ವ್ಯಕ್ತಿಯೊಬ್ಬ ರಹಸ್ಯವಾಗಿ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾನೆ. ಇದಾದ ಬಳಿಕ ಪ್ರಿಯಕರ ಯುವತಿಯನ್ನು ಆಕೆಯ ಅಪಾರ್ಟ್ ಮೆಂಟ್ ಗೆ ಬಿಟ್ಟು ಅಲ್ಲಿಂದ ತೆರಳಿದ್ದಾನೆ. ಆದರೆ ಈ ವೇಳೆ ಮೊಬೈಲ್ ನಲ್ಲಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಿಸಿದ್ದ ವ್ಯಕ್ತಿ, ಯುವತಿ ಅಪಾರ್ಟ್ ಮೆಂಟ್ ಹೊರಗೆ ಕಾದು ಕುಳಿತಿದ್ದಾನೆ. ಯುವತಿ ಅಪಾರ್ಟ್ ಮೆಂಟ್ ಒಳಗೆ ಹೋಗುವಾಗ ಆಕೆಯನ್ನು ಹಿಂಬಾಲಿಸಿ ಮೆಟ್ಟಿಲು ಬಳಿ ಆಕೆಯನ್ನು ಹಿಡಿದು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದ ಫೋಟೋ ಹಾಗೂ ವಿಡಿಯೋವನ್ನು ತೋರಿಸಿ ನಾನು ಪೊಲೀಸ್ ಇದನ್ನು ವೈರಲ್ ಮಾಡುತ್ತೇನೆ ಎಂದು ಆಕೆಯನ್ನು ಬೆದರಿಸಿ ಮೇಲೆ ಅತ್ಯಾಚಾರವೆಸಗಿ ಅಲ್ಲಿಂದ ಪರಾರಿ ಆಗಿದ್ದಾನೆ.
ಯುವತಿ ಪ್ರಿಯಕರನಿಗೆ ಕರೆ ಮಾಡಿ, ಮನೆಯವರೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ಆರೋಪಿಯ ಸ್ಕೆಚ್ ಬಿಡಿಸಿ ಪೊಲೀಸರು ಪತ್ತೆಗೆ ಮುಂದಾಗಿದ್ದಾರೆ. ಸಿಸಿಟವಿಯನ್ನು ಪರಿಶೀಲಿಸಿ, ಸತತ ಹುಡಕಾಟದ ಬಳಿಕ ರವಿ ಸೋಲಂಕಿ ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ