ದೆಹಲಿ ಪೊಲೀಸರ ಭರ್ಜರಿ ಬೇಟೆ : ಆರು ಜನ ಉಗ್ರರ ಬಂಧನ
Team Udayavani, Sep 14, 2021, 8:16 PM IST
ನವದೆಹಲಿ : ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ವಿದ್ವಂಸಕ ಕೃತ್ಯಕ್ಕೆ ಹೊಂಚು ಹಾಕಿದ್ದ ಆರು ಜನ ಉಗ್ರರನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ಬಂಧಿತರಲ್ಲಿ ಪಾಕ್ ನಲ್ಲಿ ತರಬೇತಿ ಪಡೆದವರು ಇಬ್ಬರು ಇದ್ದಾರೆ. ಹಲವು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ಸ್ಫೋಟಕಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಪ್ರಮೋದ್ ಮಾಹಿತಿ ನೀಡಿದರು. ಶಂಕಿತರು ದೇಶದಾದ್ಯಂತ ಸ್ಫೋಟಗಳನ್ನು ನಡೆಸಲು ಹಾಗೂ ಕೆಲವು ವ್ಯಕ್ತಿಗಳನ್ನು ಗುರಿ ಮಾಡಿ ಹತ್ಯೆ ನಡೆಸಲು ಯೋಜನೆ ರೂಪಿಸಿದ್ದರು ಎಂದು ಹೇಳಿದರು.
‘ಕೋಟಾದಿಂದ ಒಬ್ಬ, ದೆಹಲಿಯಿಂದ ಇಬ್ಬರು ಹಾಗೂ ಉತ್ತರ ಪ್ರದೇಶದಿಂದ ಮೂವರನ್ನು ಬಂಧಿಸಲಾಗಿದೆ. ಆರು ಜನರ ಪೈಕಿ ಇಬ್ಬರು ಮಸ್ಕತ್ ಮೂಲಕ ಪಾಕಿಸ್ತಾನ ಪ್ರವೇಶಿಸಿದ್ದರು. ಅಲ್ಲಿ ಅವರಿಗೆ ಸ್ಫೋಟಕಗಳು, ಎಕೆ–47 ಸೇರಿದಂತೆ ಶಸ್ತ್ರಾಸ್ತ್ರಗಳ ಬಳಕೆಯ ಕುರಿತು 15 ದಿನಗಳ ತರಬೇತಿ ನೀಡಲಾಗಿತ್ತು’ ಎಂದು ದೆಹಲಿ ಪೊಲೀಸ್ ವಿಶೇಷ ಘಟಕ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ