ದೆಹಲಿ; ಗೋಕುಲ್ ಪುರಿ ಸಿಎಎ ವಿರೋಧಿ ಪ್ರತಿಭಟನೆ, ಘರ್ಷಣೆ; ಹೆಡ್ ಕಾನ್ಸ್ ಟೇಬಲ್ ಸಾವು
ಹೆಡ್ ಕಾನ್ಸ್ ಟೇಬಲ್ ರತನ್ ಲಾಲ್ ಸಾವನ್ನಪ್ಪಿರುವ ಪೊಲೀಸ್ ಎಂದು ಗುರುತಿಸಲಾಗಿದೆ.
Team Udayavani, Feb 24, 2020, 5:31 PM IST
ನವದೆಹಲಿ:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ರಾಷ್ಟ್ರರಾಜಧಾನಿ ಗೋಕುಲ್ ಪುರಿಯಲ್ಲಿ ಸೋಮವಾರ ನಡೆದಿದೆ.
ಹೆಡ್ ಕಾನ್ಸ್ ಟೇಬಲ್ ರತನ್ ಲಾಲ್ ಸಾವನ್ನಪ್ಪಿರುವ ಪೊಲೀಸ್ ಎಂದು ಗುರುತಿಸಲಾಗಿದೆ. ಗೋಕುಲ್ ಪುರಿಯಲ್ಲಿ ನಡೆದ ಕಲ್ಲು ತೂರಾಟ ಘಟನೆಯಲ್ಲಿ ಡಿಸಿಪಿ ಶಾರದಾ, ಅಮಿತ್ ಶರ್ಮಾ ಕೂಡಾ ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ.
ಗಲಭೆಕೋರರು ಭಜನ್ ಪುರಾ ಪ್ರದೇಶದಲ್ಲಿ ಪೆಟ್ರೋಲ್ ಬಂಕ್ ಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಪ್ರಕಾರ, ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿಯಾಗಿದ್ದು, ಬೆಂಕಿಯಿಂದ ಪೆಟ್ರೋಲ್ ಬಂಕ್ ಭಾಗಶಃ ಹಾನಿಯಾಗಿರುವುದಾಗಿ ವರದಿ ತಿಳಿಸಿದೆ.
ಸಿಎಎ ವಿರೋಧಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದ ನಂತರ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದು, ಇದೊಂದು ತುಂಬಾ ಯಾತನಾದಾಯಕ ಸುದ್ದಿಯಾಗಿದೆ. ದಿಲ್ಲಿಯಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಬೇಕಾಗಿದೆ. ದಿಲ್ಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಶಾಂತಿ ಮತ್ತು ಸೌಹಾರ್ದತೆ ನೆಲೆಸುವಂತೆ ಮಾಡಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಹಾಗೂ ಕೇಂದ್ರ ಗೃಹ ಸಚಿವರಲ್ಲಿ ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು