ದೆಹಲಿ, ಉತ್ತರ ಭಾರತದಲ್ಲಿ ಅಕಾಲಿಕ ಬಿರುಮಳೆ; 25ಕ್ಕೂ ಹೆಚ್ಚು ಬಲಿ
Team Udayavani, May 3, 2018, 10:16 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಬುಧವಾರ ರಾತ್ರಿ ಅಕಾಲಿಕ ಮಳೆಯಾಗಿದ್ದು ಅವಘಡಗಳಿಗೆ 25 ಕ್ಕೂ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗುಡುಗು ಮಿಂಚು, ಬಿರುಗಾಳಿಯೊಂದಿಗೆ ಭರ್ಜರಿ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ತಂಪೆರದರೆ, ರೈತರು ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಗೆ ಗುರಿಯಾಗಿದ್ದಾರೆ.
ರಾತ್ರಿ ದೆಹಲಿಯಲ್ಲಿ 13.4 ಮಿಮಿ ಮಳೆಯಾಗಿರುವ ಬಗ್ಗೆ ವರದಿಯಾಗಿದ್ದು , ರಾತ್ರಿಯೂ ಮಳೆ ಮುಂದುವರಿದಿತ್ತು. ಬಿಹಾರ ಉತ್ತರ ಪ್ರದೇಶ ಮತ್ತು ಪಂಜಾಬ್ನಲ್ಲಿ ಬಲವಾದ ಗಾಳಿ ಸಹಿತ ಮಳೆಯಾಗಿದೆ. 40 ಡಿಗ್ರಿ ಸೆಲ್ಸಿಯಸ್ನಷ್ಟಿದ್ದ ತಾಪಮಾನ ಇಳಿಕೆಯಾಗಿದೆ ಎಂದು ತಿಳಿದು ಬಂದಿದೆ.
ಉತ್ತರಪ್ರದೇಶದಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಮಳೆ ಸಂಬಂಧಿ ಅವಘಡಗಳಿಗೆ 23 ಮಂದಿ ಸಾವನ್ನಪ್ಪಿದ್ದಾರೆ. ಆಗ್ರಾದಲ್ಲಿ ಶಿಕ್ಷಣ ಸಂಸ್ಥೆಯೊಂದರ ಕಟ್ಟಡ ಕುಸಿದು ಬಿದ್ದ ಪರಿಣಾಮ 23 ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಜ್ಯದ ವಿವಿಧೆಡೆ 130 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಿದ್ದು ಸಾವಿರಾರು ಜನರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.
ಸಹರಣ್ಪುರದಲ್ಲಿ ಮರ ಬಿದ್ದ ಪರಿಣಾಮ 8 ವರ್ಷದ ಬಾಲಕಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ