ಎವೈ.1 ಸೋಂಕನ್ನು ಗಂಭೀರವಾಗಿ ಗಮನದಲ್ಲಿಟ್ಟುಕೊಂಡು ಲಸಿಕಾ ಅಭಿಯಾನಕ್ಕೆ ಚುರುಕು : ಪೌಲ್

ಡೆಲ್ಟಾ ಪ್ಲಸ್ ಸೋಂಕಿನ ಬಗ್ಗೆ ಜಾಗೃತಿ ಬಹಳ ಮುಖ್ಯ : ನೀತಿ ಆಯೋಗದ ಸದಸ್ಯ ವಿ. ಕೆ ಪೌಲ್ ಎಚ್ಚರಿಕೆ

Team Udayavani, Jun 15, 2021, 8:47 PM IST

delta-plus-coronavirus-covid19-vaccination-to-speed-up-in-coming-weeks-says-vk-paul

ನವ ದೆಹಲಿ : ಭಾರತದಲ್ಲಿ ಪತ್ತೆಯಾದ ಕೋವಿಡ್ ರೂಪಾಂತರಿ ಡೆಲ್ಟಾ ಪ್ಲಸ್(ಎವೈ.1) ಸೋಂಕನ್ನು ಗಮನದಲ್ಲಿ ಇಟ್ಟುಕೊಂಡು ದೇಶದಾದ್ಯಂತ ಲಸಿಕಾ ಅಭಿಯಾನಕ್ಕೆ ಚುರುಕು ನೀಡಲಾಗುವುದು ಎಂದು ನೀತಿ ಆಯೋಗದ ಸದಸ್ಯ ವಿ. ಕೆ ಪೌಲ್ ಹೇಳಿದ್ದಾರೆ.

ಇಂದು (ಮಂಗಳವಾರ, ಜೂನ್ 15)  ಆರೋಗ್ಯ ಸಚಿವಾಲಯದ ಸುದ್ದಿಗೋಷ್ಠಿಯನ್ನು ಉದ್ದೇಶಿದಸಿ ಮಾತನಾಡಿದ ಪೌಲ್, ಕೋವಿಡ್ ಸೋಂಕು ದೇಶದಾದ್ಯಂತ ಗಣನೀಯವಾಗಿ ಇಳಿಮುಖ ಕಾಣತ್ತಿರುವ ಹಿನ್ನೆಲೆಯಲ್ಲಿ  ಹಲವೆಡೆ ಅನ್ ​ಲಾಕ್ ಮಾಡಲಾಗುತ್ತಿದೆ. ಅನ್ ಲಾಕ್ ಮಾಡಲಾಗುತ್ತಿದೆ ಎಂಬ ಕಾರಣಕ್ಕೆ ಜನರು ಸಾಮಾಜಿಕ ಅಂತರ ಕಾಪಾಡುವುದನ್ನು ಮರೆಯಬಾರದು, ಶಿಸ್ತು ಮತ್ತು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಬಿಜೆಪಿಯ ಭ್ರಷ್ಟಾಚಾರಗಳ ವಿರುದ್ಧ ಧ್ವನಿಯೆತ್ತಬೇಕಿದೆ :ಎಐಸಿಸಿ ಗೋವಾ ಉಸ್ತುವಾರಿ ಗುಂಡೂರಾವ್

ಇನ್ನು, ಡೆಲ್ಟಾ ಪ್ಲಸ್ ಸೋಂಕಿನ ಕುರಿತಾಗಿ ಉಲ್ಲೇಖಿಸಿದ ಅವರು, ಈ ರೂಪಾಂತರಿ ಸೋಂಕು ಮಾರ್ಚ್​ ನಲ್ಲಿ ಮೊಟ್ಟ ಮೊದಲ ಬಾರಿಗೆ ಪತ್ತೆಯಾಗಿದೆ. ಈ ಸೋಂಕಿನ ಬಗ್ಗೆ ಆತಂಕ ಬೇಕಾಗಿಲ್ಲ. ಸೋಂಕಿನ ಹರಡುವಿಕೆ ಪ್ರಮಾಣ ಈಗ ಬಹಳಷ್ಟು ಕಡಿಮೆಯಾಗಿದೆ. ಕೋವಿಡ್ ಸೋಂಕು ನಿಯಂತ್ರಣ ಮಾಡುವಲ್ಲಿ ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಡೆಲ್ಟಾ ಪ್ಲಸ್ ಸೋಂಕಿನ ಬಗ್ಗೆ ಜಾಗೃತಿ ಬಹಳ ಮುಖ್ಯ. ಅತೀ ವೇಗವಾಗಿ ಹರಡುವ ಸಾಮರ್ಥ್ಯವನ್ನು ಈ ಸೋಂಕು ಹೊಂದಿರುವುದಿಂದ ಎಚ್ಚರಿಕೆ ವಹಿಸುವುದು ಬಹಳ ಮುಖ್ಯ ಎಂದು ಅವರು ಅಭಿಪ್ರಾಯ ಮಟ್ಟಿದ್ದಾರೆ.

ನೊವಾವಾಕ್ಸ್ ಲಸಿಕೆಯ ಕುರಿತಾಗಿ ಮಾತನಾಡಿದ ಅವರು, ಈಗಿರುವ ಅಧ್ಯಯನದ ವರದಿಯಂತೆ ನೊವಾವಾಕ್ಸ್ ಲಸಿಕೆಯು ಬಹಳ ಸುರಕ್ಷಿತ ಹಾಗೂ ಪರಿಣಾಮಕಾರಿ ಆಗಿದೆ. ನೊವಾವಾಕ್ಸ್ ಲಸಿಕೆಯನ್ನು ಮುಂದೆ ಭಾರತದಲ್ಲೇ ತಯಾರಿಸಲಾಗುವುದು. ವೈದ್ಯಕೀಯ ಪ್ರಯೋಗಗಳು ಈ ಕುರತಂತೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಆರೋಗ್ಯ ಸಚಿವಾಲಯದ ಸಹ ಕಾರ್ಯದರ್ಶಿ ಲವ್ ಅಗರ್ವಾಲ್ ಮಾತನಾಡಿ, ಭಾರತದಲ್ಲಿ ಕೋವಿಡ್ ಮಹಾ ಪಿಡುಗಿನ ಹೊಸ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. ಕೋವಿಡ್ ಸೋಂಕಿನ ಹೊಸ ಪ್ರಕರಣಗಳಲ್ಲಿ ಗಣನೀಯ ಇಳಿಕೆ ಮುಂದುವರಿಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಸದ್ಯ 9.13 ಲಕ್ಷ ಸಕ್ರಿಯ ಪ್ರಕರಣಗಳಿವೆ ಎಂದು ಅವರು ತಿಳಿಸಿದ್ದಾರೆ.

ಭಾರತದಲ್ಲಿ ಈಗಾಗಲೇ ಪತ್ತೆಯಾಗಿರುವ ಬಿ.1.617.2 ರೂಪಾಂತರಿ ಸೋಂಕಿಗೆ  ವಿಶ್ವ ಆರೋಗ್ಯ ಸಂಸ್ಥೆಯು ಡೆಲ್ಟಾ ಸೋಂಕು ಎಂದು ಹೆಸರಿಟ್ಟಿದೆ.  ಹೊಸ ರೂಪಾಂತರಿ ಸೋಂಕುಗಳನ್ನು ಯಾವುದೇ ದೇಶದ ಹೆಸರಿನಿಂದ ಉಲ್ಲೇಖಿಸುವುದು ಬೇಡ ಎಂಬ ಕಾರಣದಿಂದ ಡೆಲ್ಟಾ ರೂಪಾಂತರಿ ಸೋಂಕು ಎಂದು ಹೆಸರಿಟ್ಟಿದೆ. ಆದರೆ, ಈಗ ಇದೇ ಡೆಲ್ಟಾ ರೂಪಾಂತರಿ ಸೋಂಕು ಮತ್ತೆ ರೂಪಾಂತರಗೊಂಡಿದೆ. ರೂಪಾಂತರಗೊಂಡ ಹೊಸ ಪ್ರಭೇದದ ಸೋಂಕಿಗೆ ಡೆಲ್ಟಾ ಪ್ಲಸ್ ಅಥವಾ ಎವೈ.1 ಎಂದು ಹೆಸರಿಡಲಾಗಿದೆ.

ಇದನ್ನೂ ಓದಿ : ಭಾರತದಲ್ಲಿ ಪತ್ತೆಯಾದ ಡೆಲ್ಟಾ ರೂಪಾಂತರಿ ವಿರುದ್ಧ ಫೈಜರ್ ಶೇ. 92 ರಷ್ಟು ಪರಿಣಾಮಕಾರಿ : ವರದಿ

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.