ದೇವಿಗೆ ನಾಲಿಗೆಯನ್ನೇ ಕತ್ತರಿಸಿ ಅರ್ಪಿಸಿದ ಭಕ್ತನ ಸ್ಥಿತಿ ಗಂಭೀರ!
ಪತ್ನಿಯೊಂದಿಗೆ ದೇವಾಲಯಕ್ಕೆ ಬಂದು ದೇಹದ ಪ್ರಧಾನ ಅಂಗವನ್ನೇ ಅರ್ಪಿಸಿದ...
Team Udayavani, Sep 10, 2022, 3:03 PM IST
ಸಾಂದರ್ಭಿಕ ಚಿತ್ರ
ಕೌಶಂಬಿ: ಇಲ್ಲಿನ ಮಾ ಶೀಟ್ಲಾ ದೇವಸ್ಥಾನದಲ್ಲಿ ಭಕ್ತನೊಬ್ಬ ತನ್ನ ನಾಲಿಗೆಯನ್ನು ಕತ್ತರಿಸಿ ದೇವರಿಗೆ ಅರ್ಪಿಸಿದ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಅಂಧ ಶ್ರದ್ಧೆಯೋ ಭಕ್ತಿಯ ಪರಾಕಾಷ್ಠೆಯೋ ಎಂಬಂತೆ ದೇಹದ ಪ್ರಧಾನ ಅಂಗವನ್ನೇ ಕತ್ತರಿಸಿದ ಕೌಶಂಬಿ ನಿವಾಸಿ ಸಂಪತ್ (38) ಎಂಬ ಭಕ್ತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ.
ಸಂಪತ್ ಪತ್ನಿ ಬನ್ನೋ ದೇವಿ ದೇವಸ್ಥಾನಕ್ಕೆ ಬಂದು ಗಂಗಾ ನದಿಯಲ್ಲಿ ಸ್ನಾನ ಮಾಡಿದ ನಂತರ ಪೂಜೆ ಸಲ್ಲಿಸಿದರು. ದೇವಾಲಯದ ಪ್ರದಕ್ಷಿಣೆ ಪೂರ್ಣಗೊಳಿಸಿದ ನಂತರ, ನಾಲಿಗೆಯನ್ನು ಬ್ಲೇಡ್ನಿಂದ ಕತ್ತರಿಸಿ ದೇವಾಲಯದ ಬಾಗಿಲಿನ ಚೌಕಟ್ಟಿನಲ್ಲಿ ಇಟ್ಟಿದ್ದಾನೆ ಎಂದು ಕರ್ಹಾ ಧಾಮ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಅಭಿಲಾಷ್ ತಿವಾರಿ ಹೇಳಿದ್ದಾರೆ.
ಶುಕ್ರವಾರ ರಾತ್ರಿ ದೇವಸ್ಥಾನಕ್ಕೆ ಭೇಟಿ ನೀಡುವ ಇಚ್ಛೆಯನ್ನು ಪತಿ ವ್ಯಕ್ತಪಡಿಸಿದ್ದರು ಎಂದು ಬನ್ನೋ ದೇವಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್