ಮುಂದಿನ ಪ್ರಧಾನಿ ಯಾರೆಂದು ಹೇಳುವುದು ಕಷ್ಟ: ಬಾಬಾ ರಾಮ್‌ ದೇವ್‌

Team Udayavani, Dec 26, 2018, 4:00 PM IST

baba-ram-dev-700.jpg

ಹೊಸದಿಲ್ಲಿ : ”ಭಾರತದ ಮುಂದಿನ ಪ್ರಧಾನಿ ಯಾರು ಎಂಬ ಬಗ್ಗೆ ಭವಿಷ್ಯ ನುಡಿಯುವುದು ಕಷ್ಟ” ಎಂದು ಯೋಗ ಗುರು ಬಾಬಾ ರಾಮದೇವ್‌ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಇರುವಂತೆಯೇ ಅವರು ಈ ಮಾತುಗಳನ್ನಾಡಿದ್ದಾರೆ.

ಬಾಬಾ ರಾಮ್‌ ದೇವ್‌ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದರು. “ಈ ಬಾರಿ ದೇಶದಲ್ಲಿನ ರಾಜಕೀಯ ಪರಿಸ್ಥಿತಿ ತುಂಬ ಸಂಕೀರ್ಣ ಇದೆ; ಯಾವುದೇ ಭವಿಷ್ಯ ನುಡಿಯುವುದು ಸುಲಭವಲ್ಲ” ಎಂದವರು ಹೇಳಿದರು.

“ದೇಶದಲ್ಲಿನ ರಾಜಕೀಯ ಸ್ಥಿತಿಗತಿ ಅಸ್ಥಿರವಿದೆ. ಮುಂದಿನ ಲೋಕಸಭಾ ಚುನಾವಣೆಗೆ ಘೋರವಾದ ಕದನ ನಡೆಯುವುದು ನಿಶ್ಚಿತವಿದೆ. ಈ ಕದನವನ್ನು ಯಾರು ಗೆಲ್ಲುತ್ತಾರೆ; ಯಾರು ಪ್ರಧಾನಿ ಆಗುತ್ತಾರೆ ಎಂದು ಹೇಳುವುದು ಬಹಳ ಕಷ್ಟ” ಎಂದು ಬಾಬಾ ರಾಮ್‌ ದೇವ್‌ ಅವರು ರಾಮೇಶ್ವರಂ ನಲ್ಲಿ ನಡೆದ ಭಾರತ ಸ್ವಾಭಿಮಾನ ಸಭೆಯಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. 

“ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾನು ಯಾವುದೇ ವ್ಯಕ್ತಿ ಅಥವಾ ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ” ಎಂದು ರಾಮ್‌ ದೇವ್‌ ಖಡಕ್‌ ಆಗಿ ನುಡಿದರು. 

“ಭಾರತವನ್ನು ಹಿಂದೂ ರಾಷ್ಟ್ರ ಮಾಡುವುದು ನಮ್ಮ ಉದ್ದೇಶವಲ್ಲ; ಆದರೆ ಆಧ್ಯಾತ್ಮಿಕ ದೇಶವನ್ನಾಗಿ ಮಾಡುವುದು ನಮ್ಮ ಗುರಿ; ಭಾರತವನ್ನು ಮಾತ್ರವಲ್ಲ ಇಡಿಯ ವಿಶ್ವವನ್ನು ಆಧ್ಯಾತ್ಮಿಕ ಜಗತ್ತನ್ನಾಗಿ ಪರಿವರ್ತಿಸುವುದು ನಮ್ಮ ಗುರಿ” ಎಂದು ಯೋಗ ಗುರು ಹೇಳಿದರು. 

ಈಚಿನ ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಬಾಬಾ ರಾಮ್‌ ದೇವ್‌ ಅವರು ಈ ಮಾತುಗಳನ್ನು ಆಡಿರುವುದು ಸ್ಪಷ್ಟವಿದೆ ಎಂದು ತಿಳಿಯಲಾಗಿದೆ. 

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.