ಗಡಿಯಾಚೆಗಿನ ಪಾವತಿಗೂ ಡಿಜಿಟಲ್‌ ರೂಪಾಯಿ! RBI ಗವರ್ನರ್‌ ಶಕ್ತಿಕಾಂತ್‌ ದಾಸ್‌


Team Udayavani, Jun 28, 2023, 7:30 AM IST

ಗಡಿಯಾಚೆಗಿನ ಪಾವತಿಗೂ ಡಿಜಿಟಲ್‌ ರೂಪಾಯಿ! RBI ಗವರ್ನರ್‌ ಶಕ್ತಿಕಾಂತ್‌ ದಾಸ್‌

ಕೋಲ್ಕತ್ತಾ: ಗಡಿಯಾಚೆಗಿನ ಪಾವತಿಗೆ ಡಿಜಿಟಲ್‌ ರೂಪಾಯಿ ಬಳಸಲು ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಮುಖ ಜಾಗತಿಕ ಸೆಂಟ್ರಲ್‌ ಬ್ಯಾಂಕ್‌ಗಳೊಂದಿಗೆ ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ) ಮಾತುಕತೆ ನಡೆಸಲಾರಂಭಿಸಿದೆ. ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರೇ ಈ ಮಾಹಿತಿ ನೀಡಿದ್ದಾರೆ.

ಸ್ಥಳೀಯ ರೂಪಾಯಿಯು ಜಾಗತಿಕವಾಗಿ ಸ್ವೀಕಾರಾರ್ಹವಾಗಬೇಕು ಎಂಬ ಉದ್ದೇಶದಿಂದ ಕಳೆದ ವರ್ಷವಷ್ಟೇ ಆರ್‌ಬಿಐ ವ್ಯಾಪಾರ-ವಹಿವಾಟುಗಳ ಪಾವತಿಯನ್ನು ರೂಪಾಯಿಯಲ್ಲೇ ಮಾಡಲು ಅನುಮತಿ ನೀಡಿತ್ತು.

ಲಂಡನ್‌ನ ಸೆಂಟ್ರಲ್‌ ಬ್ಯಾಂಕಿಂಗ್‌ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ “ವರ್ಷದ ಗವರ್ನರ್‌’ ಗೌರವ ಸ್ವೀಕರಿಸಿದ ಬಳಿಕ ಸಂದರ್ಶನವೊಂದರಲ್ಲಿ ಮಾತನಾಡಿದ ಶಕ್ತಿಕಾಂತ್‌ ದಾಸ್‌, “ಸೆಂಟ್ರಲ್‌ ಬ್ಯಾಂಕ್‌ ಡಿಜಿಟಲ್‌ ಕರೆನ್ಸಿಯು(ಸಿಬಿಡಿಸಿ) ಭವಿಷ್ಯದ ಹಣವಾಗಲಿದೆ. ನಾವು ಅದಕ್ಕಾಗಿ ಸಿದ್ಧತೆ ನಡೆಸುತ್ತಿದ್ದೇವೆ. ಪ್ರಸಕ್ತ ಮಾಸಾಂತ್ಯದ ವೇಳೆಗೆ, ನಾವು ರಿಟೇಲ್‌ ಸಿಬಿಡಿಸಿ ಬಳಕೆ ಮಾಡುತ್ತಿರುವ ಹತ್ತು ಲಕ್ಷ ಮಂದಿಯನ್ನು ತಲುಪಲಿದ್ದೇವೆ. ಅದು ದೇಶೀಯ ಪಾವತಿಗಾಗಿ ಮಾತ್ರ. ಆದರೆ, ಗಡಿಯಾಚೆಗಿನ ಪಾವತಿಯೂ ಅತ್ಯಂತ ಕ್ಷಿಪ್ರವಾಗಿ, ಸರಾಗವಾಗಿ, ಅಗ್ಗವಾಗಿ ಆಗಬೇಕೆಂಬ ಉದ್ದೇಶವೂ ಇದ್ದು, ಅದಕ್ಕಾಗಿ ನಾವು ಕೇಂದ್ರೀಯ ಬ್ಯಾಂಕುಗಳೊಂದಿಗೆ ಚರ್ಚೆ ನಡೆಸುತ್ತಿದ್ದೇವೆ’ ಎಂದು ಹೇಳಿದ್ದಾರೆ.

ಭಾರತದಲ್ಲಿ ನಮಗೆ ಡಾಲರ್‌ಗೆ ಕೊರತೆ ಇಲ್ಲ. ಕೆಲವೊಂದು ದೇಶಗಳ ಮಾರುಕಟ್ಟೆಗಳಲ್ಲಿ ಡಾಲರ್‌ ಅಭಾವವಿರುವ ಕಾರಣ, ಅವರಿಗೆ ಆಮದು ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ನಾವು ನೀಡುತ್ತಿರುವ ಅವಕಾಶದಿಂದ, ಯಾವುದೇ ದೇಶಗಳು ಭಾರತದಿಂದ ಆಮದು ಮಾಡಿಕೊಂಡು, ರೂಪಾಯಿಯಲ್ಲೇ ಪಾವತಿ ಮಾಡಬಹುದು ಎಂದೂ ದಾಸ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.