ಕೋವಿಡ್‌ ನಡುವೆಯೇ ವಿಜ್ಞಾನಿಗಳ ಆವಿಷ್ಕಾರ

Team Udayavani, Dec 29, 2020, 6:35 AM IST

ಕೋವಿಡ್‌ ನಡುವೆಯೇ ವಿಜ್ಞಾನಿಗಳ ಆವಿಷ್ಕಾರ

ಒಂದೆಡೆ ಇಡೀ ವರ್ಷ ದೇಶವು ಕೋವಿಡ್‌ ವಿರುದ್ಧದ ಹೋರಾಟ ದಲ್ಲೇ ತನ್ನ ಬಹುಪಾಲು ಸಮಯವನ್ನು ಕಳೆಯಿತಾದರೂ, ಇದೇ ವೇಳೆಯಲ್ಲೇ ಭಾರತೀಯ ಸಂಶೋಧಕರು ವಿಶಿಷ್ಟ ಆವಿಷ್ಕಾರಗಳ ಮೂಲಕ ವಿಜ್ಞಾನ ಲೋಕಕ್ಕೆ ಕೊಡುಗೆ ನೀಡುತ್ತಲೇ ಇದ್ದರು ಎನ್ನುವುದು ವಿಶೇಷ.
ಈ ವರ್ಷದ ಭಾರತೀಯ ವಿಜ್ಞಾನಿಗಳು, ಸಂಶೋಧಕರ ಕೆಲ ಆವಿಷ್ಕಾರಗಳ ಪರಿಚಯ ಇಲ್ಲಿದೆ…

ಫೋಕಸ್‌ ಅಗತ್ಯವಿಲ್ಲದ ಲೆನ್ಸ್‌
ಕೆಮೆರಾ ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರವೆನ್ನಿಸುವಂಥ ಸಂಶೋಧನೆಯನ್ನು ಭಾರತೀಯ ಮೂಲದ ವಿಜ್ಞಾನಿ ರಾಜೇಶ್‌ ಮೇನನ್‌ ಅಭಿವೃದ್ಧಿಪಡಿಸಿದ್ದಾರೆ. ಅವರು ಅಭಿವೃದ್ಧಿಪಡಿಸಿರುವ ಲೆನ್ಸ್‌ ಬಳಸಿದರೆ ಕೆಮರಾವನ್ನು ಫೋಕಸ್‌ ಮಾಡುವ ಅಗತ್ಯವೇ ಇರುವುದಿಲ್ಲ. ಎಲ್ಲÉ ವಸ್ತುಗಳನ್ನೂ ಒಂದೇ ಸಮಯದಲ್ಲಿ ಈ ಹಗುರವಾದ ಲೆನ್ಸ್‌ ಫೋಕಸ್‌ ಮಾಡಬಲ್ಲದು. ಈ ತಂತ್ರಜ್ಞಾನವು ಮುಂದಿನ ದಿನಗಳಲ್ಲಿ ಸ್ಮಾರ್ಟ್‌ ಫೋನ್‌ ಕೆಮೆರಾಗಳು, ಡಿಜಿಟಲ್‌ ಕೆಮೆರಾಗಳು, ಎಂಡೋಸ್ಕೋಪಿಯಂಥ ವೈದ್ಯಕೀಯದಲ್ಲಿ ಬಹಳ ಬದಲಾವಣೆ ತರಲಿದೆ ಎನ್ನಲಾಗುತ್ತದೆ.

ಮೊದಲ ಹೈಡ್ರೋಜನ್‌
ರಾಷ್ಟ್ರೀಯ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನ ಮಂಡಳಿ(ಸಿಎಸ್‌ಐಆರ್‌) ದೇಶದ ಮೊದಲ ಹೈಡ್ರೋಜನ್‌ ಚಾಲಿತ ಕಾರನ್ನು ಯಶಸ್ವಿಯಾಗಿ ಪರೀಕ್ಷಿಸಿತು. ಈ ತಂತ್ರಜ್ಞಾನವು ವಿದ್ಯುತ್‌ ಶಕ್ತಿಯನ್ನು ಉತ್ಪಾ ಹೈಡ್ರೋಜನ್‌ ಮತ್ತು ಆಮ್ಲಜನಕ (ಗಾಳಿಯಿಂದ) ನಡುವಿನ ರಾಸಾಯನಿಕ ಪ್ರತಿಕ್ರಿಯೆಗಳನ್ನು ಬಳಸುತ್ತದಾದ್ದರಿಂದ, ಪಳೆಯುಳಿಕೆ ಇಂಧನಗಳ ಬಳಕೆಯನ್ನು ತಪ್ಪಿಸುತ್ತದೆ. ಅಲ್ಲದೇ ಈ ತಂತ್ರಜ್ಞಾನವು ಕೇವಲ ನೀರಿನ ಆವಿಯನ್ನು ಹೊರಸೂಸುವುದರಿಂದಾಗಿ ವಾಯುಮಾಲಿನ್ಯವೂ ಉಂಟಾಗುವುದಿಲ್ಲ.

ಕಪ್ಪುಕುಳಿಯ ಅಳತೆಗೋಲು
ಭಾರತೀಯ ವಿಜ್ಞಾನಿಗಳ ನೇತೃತ್ವದ ತಂಡವೊಂದು ಕಾಸ್ಮಿಕ್‌ ಎಕ್ಸ್‌ರೇ ಕಿರಣಗಳವಿಶಿಷ್ಟ ವ್ಯಾಪ್ತಿಯನ್ನು ಪತ್ತೆ ಪಚ್ಚುವ ಮೂಲಕ ಕಪ್ಪುಕುಳಿಗಳ ಸುತ್ತಲಿನ ಗಡಿಯನ್ನು ಗುರುತಿಸುವ ದಾರಿಯನ್ನು ಕಂಡುಹಿಡಿದಿದೆ. ಇದರಿಂದಾಗಿ ಬ್ರಹ್ಮಾಂಡದಲ್ಲಿರುವ ನ್ಯೂಟ್ರಾನ್‌ ನಕ್ಷತ್ರಗಳು ಹಾಗೂ ಇತರೆ ದ್ರವ್ಯ ರಾಶಿಯಿಂದ ಕಪ್ಪು ಕುಳಿಯನ್ನು ಪ್ರತ್ಯೆಕಿಸಿ ಅಳತೆ ಮಾಡಲು ಸಾಧ್ಯವಾಗುತ್ತದೆ.

ಚಂದ್ರನ ಮೇಲೆ ಇಟ್ಟಿಗೆಗೆ ದಾರಿ
ಭವಿಷ್ಯದಲ್ಲಿ ಚಂದ್ರನ ಮೇಲೆ ಮನುಷ್ಯನ ವಾಸಕ್ಕಾಗಿ ಕಟ್ಟಡ ರೀತಿಯ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳುವ ಉದ್ದೇಶ ವಿವಿಧ ದೇಶಗಳಿಗಿದೆ. ಆದರೆ ಅದಕ್ಕಾಗಿ ಇಟ್ಟಿಗೆಗಳನ್ನು ಇಲ್ಲಿಂದ ಒಯ್ದರೆ ಬಹಳ ದುಬಾರಿಯಾಗುತ್ತದೆ. 0.45 ಗ್ರಾಂ. ವಸ್ತುಗಳನ್ನು ಭೂಮಿಯಿಂದ ಬಾಹ್ಯಾಕಾಶಕ್ಕೆ ಒಯ್ಯಲು 7.5 ಲಕ್ಷ ರೂಪಾಯಿ ಖರ್ಚಾಗುತ್ತದೆ! ಈ ಕಾರಣಕ್ಕಾಗಿಯೇ ಭಾರತೀಯ ವಿಜ್ಞಾನಸಂಸ್ಥೆ ಹಾಗೂ ಇಸ್ರೋ ವಿಜ್ಞಾನಿಗಳು ಚಂದ್ರನ ಮೇಲೆಯೇ ಇಟ್ಟಿಗೆನ್ನು ತಯಾರಿಸುವ ವಿಧಾನ ಕಂಡುಹಿಡಿದಿದ್ದಾರೆ! ಚಂದ್ರನ ಮಣ್ಣಗೆ ಒಂದು ತಳಿಯ ಬ್ಯಾಕ್ಟೀರಿಯಾ ಹಾಗೂ ಚವಳಿ ಕಾಯನ್ನು ಮಿಶ್ರಣ ಮಾಡಿದರೆ ಅದು ಇಟ್ಟಿಗೆಯಂತೆ ಗಟ್ಟಿಯಾಗಬಲ್ಲದು ಎನ್ನುವುದನ್ನು ಭಾರತೀಯ ವಿಜ್ಞಾನಿಗಳು ಸಂಶೋಧಿಸಿದ್ದಾರೆ.

ವ್ಯೋಮಮಿತ್ರ ಎಂಬ ರೊಬಾಟ್‌
ಇಸ್ರೋ, 2021ರ ಡಿಸೆಂಬರ್‌ ವೇಳೆಗೆ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾತ್ರೆ ಗಗನ್‌ ಯಾನ್‌ ಮಿಷನ್‌ಗೆ ಸಜ್ಜುಗೊಳ್ಳುತ್ತಿದೆ. ಇದರ ಭಾಗವಾಗಿ ಮೊದಲು ಲೇಡಿ ರೊಬಾಟ್‌ನ್ನು ಇಸ್ರೋ ಬಾಹ್ಯಾಕಾಶಕ್ಕೆ ಕಳಿಸಲಿದೆ! “ವ್ಯೋಮಮಿತ್ರ’ ಎಂಬ ಹೆಸರಿನ ಈ ರೋಬೋಟ್‌ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ರೂಪಿತವಾಗಿದ್ದು, ಬಾಹ್ಯಾಕಾಶ ನೌಕೆಯಲ್ಲಿ ಗಗನ ಯಾತ್ರಿಗಳೊಂದಿಗೆ ಸಂವಹನ ನಡೆಸುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಬಾಹ್ಯಾಕಾಶದಲ್ಲಿ ಮಾನವ ಕ್ರಿಯೆಗಳನ್ನು ಅನುಸರಿಸುವ ಸಾಮರ್ಥ್ಯ ಈ ರೋಬೋಟ್‌ ಹೊಂದಿದೆ. ಎಲ್ಲ ವ್ಯವಸ್ಥೆಗಳೂ ಸರಿ ಇದೆಯೇ ಎಂದು ಪರೀಕ್ಷಿಸಲು ವಿಜ್ಞಾನಿಗಳಿಗೆ ಸಹಾಯ ಮಾಡುತ್ತದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.