University ಪ್ರಮಾಣ ಪತ್ರದಲ್ಲಿ ಆಧಾರ್ ಸಂಖ್ಯೆ ಬಳಸಬೇಡಿ
Team Udayavani, Sep 3, 2023, 12:16 AM IST
ಹೊಸದಿಲ್ಲಿ: ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ನೀಡುವ ಪದವಿ ಮತ್ತು ತಾತ್ಕಾಲಿಕ ಪ್ರಮಾಣ ಪತ್ರಗಳಲ್ಲಿ ವಿದ್ಯಾರ್ಥಿಗಳ ಆಧಾರ್ ಸಂಖ್ಯೆಯನ್ನು ನಮೂದಿಸಕೂಡದು ಎಂದು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ (ಯುಜಿಸಿ) ವಿವಿಗಳಿಗೆ ಸೂಚನೆ ನೀಡಿದೆ.
ವಿವಿಗಳು ಪ್ರಮಾಣ ಪತ್ರ ಕೊಡಮಾಡು ವಾಗಲೇ ಅದರಲ್ಲಿ ವಿದ್ಯಾರ್ಥಿಗಳ ಸಂಪೂರ್ಣ ಆಧಾರ್ ಸಂಖ್ಯೆಯನ್ನು ನಮೂದಿ ಸಿದರೆ, ಭವಿಷ್ಯದಲ್ಲಿ ಉದ್ಯೋಗ ನೇಮಕಾತಿ ಸಂದರ್ಭಗಳಲ್ಲಿ ದಾಖಲಾತಿ ಪರಿಶೀಲನೆ ಮಾಡಲು ಸಹಾಯವಾಗುತ್ತದೆ ಎನ್ನುವ ನಿಟ್ಟಿನಲ್ಲಿ ವಿ.ವಿ.ಗಳಿಗೆ ನಿರ್ದೇಶನ ನೀಡಲು ಹಲವು ರಾಜ್ಯಸರಕಾರಗಳು ಪ್ರಸ್ತಾವಿಸುತ್ತಿರುವುದು ವರದಿಯಾಗಿತ್ತು.
ಈ ಹಿನ್ನೆಲೆಯಲ್ಲಿ ನಿಯಮಗಳ ಪ್ರಕಾರ ಆಧಾರ್ ಸಂಖ್ಯೆಯನ್ನು ಒಳಗೊಂಡಿರುವ ಯಾವುದೇ ದಾಖಲಾತಿಯನ್ನು ಬಹಿರಂಗ ಪಡಿಸುವಂತಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆಧಾರ್ ಸಂಖ್ಯೆಯನ್ನು ಪ್ರಮಾಣ ಪತ್ರದಲ್ಲಿ ನಮೂದಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಯುಜಿಸಿ ಕಾರ್ಯದರ್ಶಿ ಮನೀಷ್ ಜೋಶಿ ಸ್ಪಷ್ಟ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು