ಒಂದೇ ಪರೀಕ್ಷೆಯ ಅಗತ್ಯವೇನು?
Team Udayavani, Feb 5, 2017, 3:45 AM IST
ನವದೆಹಲಿ: ಮೆಡಿಕಲ್, ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ಒಂದೇ ಪ್ರವೇಶ ಪರೀಕ್ಷೆ ಸಾಕು ಎಂಬ ಕೇಂದ್ರದ ನಿರ್ಧಾರವನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಇದರಿಂದ ವಿದ್ಯಾರ್ಥಿಗಳಿಗೆ ಒತ್ತಡ ಉಂಟಾಗುವುದಿಲ್ಲವೇ ಎಂದು ನ್ಯಾ.ಎ.ಕೆ.ಗೋಯಲ್ ಮತ್ತು ನ್ಯಾ.ಯು.ಯು. ಲಲಿತ್ ಅವರನ್ನೊಳಗೊಂಡ ಪೀಠ ಸರ್ಕಾರವನ್ನು ಕೇಳಿದೆ. ಇದರ ಜತೆಗೆ ಏಕೀಕೃತ ಪ್ರವೇಶ ಪರೀಕ್ಷೆ ಎಂಬ ಪ್ರಸ್ತಾಪದ ಬದಲಿ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಕೇಂದ್ರಕ್ಕೆ ಸಲಹೆ ನೀಡಿದೆ.
ಈಗ ಚಾಲ್ತಿಯಲ್ಲಿರುವ ನಿಯಮ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿದೆ. ಪ್ರವೇಶಕ್ಕೆ ಬೇಕಾಗುವ ಮಾನದಂಡವನ್ನು ಅಳೆಯಲು ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ.40 ಮತ್ತು ಆಯಾ ಕೋರ್ಸ್ಗಳ ಪ್ರವೇಶ ಪರೀಕ್ಷೆಯಲ್ಲಿ ಶೇ.60 ಅಂಕಗಳನ್ನು ಪರಿಗಣಿಸಿ ಅಂಥ ಕೋರ್ಸ್ಗಳಿಗೆ ಪ್ರವೇಶ ನೀಡಬೇಕು ಎಂದು ನ್ಯಾಯಪೀಠ ಅಭಿಪ್ರಾಯಟ್ಟಿತು. ಕೇವಲ ಪ್ರವೇಶ ಪರೀಕ್ಷೆಯಿಂದಲೇ ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿ ಮೆಡಿಕಲ್, ಎಂಜಿನಿಯರಿಂಗ್ ಕೋರ್ಸ್ಗೆ ಅರ್ಹರು ಎಂದು ತೀರ್ಮಾನಿಸುವ ಕ್ರಮ ಸರಿಯಾದುದಲ್ಲ. ಹೀಗೆಂದು ಆ ರೀತಿ ಆದೇಶ ನೀಡಲೂ ಸಾಧ್ಯವಿಲ್ಲ ಎಂದಿತು ನ್ಯಾಯಪೀಠ.
ಪ್ರವೇಶ ಪರೀಕ್ಷೆಗೆ ತರಬೇತಿ ಎಂದು ಕೋಚಿಂಗ್ ಕ್ಲಾಸ್ ನೀಡುವ ಸಂಸ್ಥೆಗಳು ವ್ಯಾಪಕವಾಗಿವೆ. ಅವುಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲವೇ ಎಂದು ಕೋರ್ಟ್ ಕೇಂದ್ರವನ್ನು ಪ್ರಶ್ನೆ ಮಾಡಿತು. ಹಾಗೆಂದು ಅವುಗಳನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕೆಂದೂ ಅಲ್ಲ ಎಂದೂ ಸ್ಪಷ್ಟನೆ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ