Doctor! ; ವಾದ ವಿವಾದ ನಡೆದು ನರ್ಸ್ ಮೇಲೆ ಗುಂಡು ಹಾರಿಸಿದ ವೈದ್ಯ
ತನ್ನೊಂದಿಗೆ ಮಾತ್ರವಲ್ಲದೆ ಬೇರೊಬ್ಬನೊಂದಿಗೂ ಸಂಬಂಧ ಹೊಂದಿದುದಕ್ಕಾಗಿ ಆಕ್ರೋಶ!!
Team Udayavani, Feb 7, 2024, 9:43 PM IST
ಜಬಲ್ಪುರ : ಮತ್ತೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಅನುಮಾನಗೊಂಡ ಬಳಿಕ ವಾದ ವಿವಾದ ನಡೆದು ವೈದ್ಯನೊಬ್ಬ ನರ್ಸ್ ಮೇಲೆ ಎರಡು ಸುತ್ತು ಗುಂಡು ಹಾರಿಸಿದ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ಬುಧವಾರ ನಡೆದಿದೆ.
ಆರೋಪಿಯನ್ನು ಡಾ ಸಂದೀಪ್ ಸೋನಿ (34) ಎಂದು ಗುರುತಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯಾಂಕಾ ಶುಕ್ಲಾ ತಿಳಿಸಿದ್ದಾರೆ.
27 ವರ್ಷದ ನರ್ಸ್ ವೈದ್ಯನೊಂದಿಗೆ ಸಂಬಂಧ ಹೊಂದಿದ್ದು, ತನ್ನ ಹಳೆಯ ಸ್ನೇಹಿತ ಇನ್ನೊಬ್ಬ ವ್ಯಕ್ತಿಯೊಂದಿಗೂ ನಿಕಟ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದು ಕೋಪದ ಭರದಲ್ಲಿ ಗುಂಡುಗಳನ್ನು ಹಾರಿಸಿದ್ದಕ್ಕಾಗಿ ವೈದ್ಯನನ್ನು ಬಂಧಿಸಲಾಗಿದೆ. ನರ್ಸ್ ಪಕ್ಕೆಲುಬುಗಳಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಪೊಲೀಸರು ವೈದ್ಯನ ವಿರುದ್ಧ ಕೊಲೆ ಯತ್ನ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ