ಜನರ ಭಾವನೆಗಳ ಜೊತೆ ಆಟವಾಡಬೇಡಿ: ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ: ಉದ್ದವ್ ಠಾಕ್ರೆ
ಬಾಂದ್ರಾದಲ್ಲಿ ವಲಸೆ ಕಾರ್ಮಿಕರು ಜಮಾಯಿಸಲು ವದಂತಿಗಳೇ ಕಾರಣ
Team Udayavani, Apr 15, 2020, 8:04 AM IST
ಮುಂಬೈ: ಕೆಲವು ಕಿಡಿಗೇಡಿಗಳು ವದಂತಿಗಳನ್ನು ಹರಡಿದ್ದರಿಂದ ಬಾಂದ್ರಾದಲ್ಲಿ ವಲಸೆ ಕಾರ್ಮಿಕರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿ ಮನೆಗೆ ತೆರಳಲು ಪಟ್ಟು ಹಿಡಿದರು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.
ಲಾಕ್ ಡೌನ್ ಮೇ 3ರವರೆಗೂ ವಿಸ್ತರಣೆಯಾದ ಬೆನ್ನಲ್ಲೆ ಕೆಲವರು ಇಂದು ದೇಶದ ವಿವಿಧೆಡೆ ತುರ್ತು ರೈಲುಗಳು ಹೊರಡಲಿದೆ ಎಂದು ಸುದ್ದಿ ಹಬ್ಬಿಸಿದ್ದರಿಂದ ಬಾಂದ್ರಾ ಪಶ್ವಿಮ ರೈಲ್ವೇ ನಿಲ್ದಾಣದಲ್ಲಿ ಸಾವಿರಾರು ಜನ ಜಮಾಯಿಸಿ ತಮ್ಮನ್ನು ತಮ್ಮ ತಮ್ಮ ಊರುಗಳಿಗೆ ಮರಳಿಸುವಂತೆ ಆಗ್ರಹಿಸಿದರು. ಲಾಕ್ ಡೌನ್ ಉಲ್ಲಂಘಿಸಿ ರೈಲ್ವೇ ನಿಲ್ದಾಣದಲ್ಲಿ ವಲಸೆ ಕಾರ್ಮಿಕರು ಜಮಾಯಿಸುತ್ತಿದ್ದಂತೆ ಪೊಲೀಸರು ಜನರ ಗುಂಪನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದಾರೆ. ಮಾತ್ರವಲ್ಲದೆ ಮುಂಬೈನಲ್ಲಿ ಸೋಂಕಿತರ ಸಂಖ್ಯೆ 1,600ಗಡಿ ದಾಟಿದ್ದರಿಂದ ಕಾರ್ಮಿಕರು ಸಾಮಾನ್ಯವಾಗಿ ಆತಂಕಕ್ಕಿಡಾಗಿದ್ದರು ಎಂದರು.
ಅವರು ಬಡ ಜನರು. ಅವರ ಭಾವನೆಗಳ ಜೊತೆ ಆಟವಾಡಬೇಡಿ. ಮತ್ತೆ ಇಂತಹ ಘಟನೆಗಳು ಪುನಾರಾವರ್ತನೆಯಾದರೆ ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಜೊತೆಗೆ ನಾವು ನಿಮ್ಮೊಂದಿಗಿದ್ದೇವೆ, ನೀವು ಸುರಕ್ಷಿತರು. ನಾನು ಕೇಂದ್ರ ಸರ್ಕಾರದೊಂದಿಗೆ ಈ ಕುರಿತು ಮಾತನಾಡುತ್ತೇನೆ ಎಂದು ತಿಳಿಸಿದರು.
ಹಣದ ಸಮಸ್ಯೆ ಮತ್ತು ಆಹಾರ ಪದಾರ್ಥಗಳಿಲ್ಲದ ಕಾರಣ ವಲಸೆ ಕಾರ್ಮಿಕರು ಮನೆಗೆ ತೆರಳಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾತನ್ನು ನಿರಾಕರಿಸಿದ ಉದ್ದವ್ ಠಾಕ್ರೆ ಅಂತಹ ಯಾವುದೇ ಸಮಸ್ಯೆಗಳಿಲ್ಲ. ಕಾರ್ಮಿಕರಿಗೆ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಮಾಲೀಕರು, ಕಾರ್ಮಿಕರನ್ನು ಮನೆ ಬಿಟ್ಟು ತೆರಳುವಂತೆ ಸೂಚಿಸಿರುವ ಕೆಲವು ಪ್ರಕರಣಗಳು ವರದಿಯಾದವು. ಆದರೇ ಅಂತಹ ಮಾಲಿಕರಿಗೆ ಕಠಿಣ ಎಚ್ಚರಿಕೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಪ್ಹಾಪ್ ನೃತ್ಯದ ಜೊತೆ ಹೈಬ್ರಿಡ್ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ
ಆತ್ಮಹತ್ಯೆ ಪ್ರಕರಣ: ವಿಸ್ಮಯಾ ಪತಿಗೆ 10 ವರ್ಷ ಜೈಲುಶಿಕ್ಷೆ ವಿಧಿಸಿದ ಕೇರಳ ಕೋರ್ಟ್
ಅಮರನಾಥ ಯಾತ್ರೆಗೆ ಹೆಚ್ಚುವರಿ ಭದ್ರತಾ ಕ್ರಮ: ಸಿಆರ್ಪಿಎಫ್
ಜಮ್ಮು- ಕಾಶ್ಮೀರ: ಹಳ್ಳಕ್ಕೆ ಬಿದ್ದ ಸಮಂತಾ-ವಿಜಯ್ ದೇವರಕೊಂಡ ವಾಹನ
ಸಿಂಧುದುರ್ಗ: ಪ್ರವಾಸಿಗರ ದೋಣಿ ಮುಳುಗಿ ಇಬ್ಬರ ಸಾವು; ಮತ್ತಿಬ್ಬರ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ
ಹಿಪ್ಹಾಪ್ ನೃತ್ಯದ ಜೊತೆ ಹೈಬ್ರಿಡ್ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ
ರೆನ್ಯೂ ಪವರ್ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ