ಪ್ರತಿ ಮನೆಗೆ ನಲ್ಲಿ ಮೂಲಕ ಜಲ ಯೋಜನೆಗೆ ಸದ್ಯದಲ್ಲೇ ಚಾಲನೆ

Team Udayavani, Aug 14, 2019, 5:09 AM IST

ನವದೆಹಲಿ: ಪ್ರಧಾನಿ ಮೋದಿ ಸರ್ಕಾರದ ಮಹತ್ವದ ಯೋಜನೆಗಳಲ್ಲೊಂದಾದ, 2024ರೊಳಗೆ ಗ್ರಾಮೀಣ ಪ್ರದೇಶಗಳ ಎಲ್ಲಾ ಮನೆಗಳಿಗೆ ನೀರು ಒದಗಿಸುವ ಯೋಜನೆಗೆ ಸದ್ಯದಲ್ಲೇ ಚಾಲನೆ ನೀಡಲಾಗುತ್ತದೆ ಎಂದು ಕೇಂದ್ರದ ಮೂಲಗಳು ತಿಳಿಸಿವೆ. ‘ಜಲ ಜೀವನ ಮಿಷನ್‌’ನಡಿ ‘ನಲ್ಲಿ ಮೂಲಕ ಜಲ’ ಎಂಬ ಧ್ಯೇಯ ವಾಕ್ಯದೊಡನೆ ಈ ಯೋಜನೆ ಕಾರ್ಯಗತಗೊಳ್ಳಲಿದ್ದು, ಎಲ್ಲಾ ರಾಜ್ಯ ಸರ್ಕಾರಗಳ ಸಹ ಭಾಗಿತ್ವದಲ್ಲಿ ಹೊಸದಾಗಿ ರೂಪುಗೊಂಡಿರುವ ಜಲ ಶಕ್ತಿ ಸಚಿವಾಲಯದ ಮೂಲಕ ಈ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ಹೇಳಲಾಗಿದೆ.

ಅಂಕಿ-ಸಂಖ್ಯೆಗಳ ಪ್ರಕಾರ, ದೇಶದ ಗ್ರಾಮೀಣ ಭಾಗಗಳಲ್ಲಿರುವ 18.5 ಕೋಟಿ ಮನೆಗಳಲ್ಲಿ ಈಗಾಗಲೇ ಹಲವಾರು ಮನೆಗಳಿಗೆ ನೀರಿನ ಸೌಕರ್ಯವಿದ್ದು, ಇನ್ನುಳಿದ 15 ಕೋಟಿ ಮನೆ ಗಳಿಗೆ ಹೊಸ ಯೋಜನೆಯಡಿ ನೀರು ಒದಗಿಸಲು ತೀರ್ಮಾನಿಸಲಾಗಿದೆ. ಸಮರ್ಪಕ ನೀರು ಪೂರೈಕೆ ವಿಚಾರದಲ್ಲಿ ಪ್ರತಿಯೊಂದು ರಾಜ್ಯದ ಆದ್ಯತೆಯು ಬೇರೆಯಾಗುವುದರಿಂದ ಆಯಾ ರಾಜ್ಯಕ್ಕೆ ಹೊಂದಾಣಿಕೆಯಾಗುವಂಥ ಯೋಜನೆಯನ್ನೇ ಅನುಷ್ಠಾನಗೊಳಿಸಲಾಗುತ್ತದೆ. ಮಂಗಳವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ