ಇ-ಶ್ರಮ್‌ ಪೋರ್ಟಲ್‌ಗೆ ಇಂದು ಚಾಲನೆ 

Team Udayavani, Aug 26, 2021, 6:40 AM IST

ಇ-ಶ್ರಮ್‌ ಪೋರ್ಟಲ್‌ಗೆ ಇಂದು ಚಾಲನೆ 

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಅಸಂಘಟಿತ ಕಾರ್ಮಿಕರಿಗಾಗಿ ರಾಷ್ಟ್ರೀಯ ಡೇಟಾಬೇಸ್‌ (National Data base for Unorganised Workers- NDUW) ಅಥವಾ ಇ- ಶ್ರಮ್‌ ಪೋರ್ಟಲ್‌ ಅನ್ನು ರಚಿಸಿದ್ದು ಗುರುವಾರದಂದು ಈ ಪೋರ್ಟಲ್‌ಗೆ ಅಧಿಕೃತ ಚಾಲನೆ ಸಿಗಲಿದೆ. ಗುರುವಾರದಿಂದಲೇ ಅಸಂಘಟಿತ ವಲಯದ ಕಾರ್ಮಿಕರು ಈ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಇದರಿಂದ ದೇಶಾದ್ಯಂತ ಇರುವ ಲಕ್ಷಾಂತರ ಅಸಂಘಟಿತ ಕಾರ್ಮಿಕರು ಒಂದೇ ವೇದಿಕೆಯಲ್ಲಿ ಗುರುತಿಸಲು ಸಾಧ್ಯವಾಗುವುದು.

ಏನಿದು ಇ- ಶ್ರಮ್‌ ಪೋರ್ಟಲ್‌? :

ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಕೃಷಿ ಮತ್ತು ಗೃಹ ಕಾರ್ಮಿಕರಂತಹ ಅಸಂಘಟಿತ ವಲಯಗಳ ಸುಮಾರು 38 ಕೋಟಿ ಕಾರ್ಮಿಕರನ್ನು ನೋಂದಾಯಿಸುವ ಗುರಿ ಹೊಂದಿರುವ ಕೇಂದ್ರ ಸರಕಾರ, ನೋಂದಾಯಿಸಲ್ಪಟ್ಟ ಕಾರ್ಮಿಕರಿಗೆ 12 ಅಂಕೆಗಳ ವಿಶಿಷ್ಟ ಸಂಖ್ಯೆಯ ಇ- ಶ್ರಮ್‌ಕಾರ್ಡ್‌ ನೀಡಲಿದೆ. ಇದು ಕಾರ್ಮಿಕರಿಗೆ ಸರಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ಸಹಕಾರಿಯಾಗಲಿದೆ.

ನೋಂದಣಿ ಹೇಗೆ? :

ಪೋರ್ಟಲ್‌ಗೆ  ಚಾಲನೆ ನೀಡಿದ ದಿನದಿಂದಲೇ ನೋಂದಣಿ ಪ್ರಕ್ರಿಯೆಯೂ ಪ್ರಾರಂಭವಾಗಲಿದೆ. ರಾಷ್ಟ್ರೀಯ ಟೋಲ್‌ ಫ್ರೀ ಸಂಖ್ಯೆ 14434ಗೆ ಕರೆ ಮಾಡಿ ಅಲ್ಲಿ ಕೇಳುವ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕವೂ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಇದಕ್ಕಾಗಿ ಕಾರ್ಮಿಕರು ತಮ್ಮ ಹೆಸರು, ವೃತ್ತಿ, ವಿಳಾಸ, ವೃತ್ತಿಯ ಪ್ರಕಾರ, ಶೈಕ್ಷಣಿಕ ಅರ್ಹತೆ, ಕೌಶಲ ಮತ್ತು ಕುಟುಂಬದ ವಿವರಗಳೊಂದಿಗೆ ಆಧಾರ್‌ ಕಾರ್ಡ್‌ ಸಂಖ್ಯೆ, ಬ್ಯಾಂಕ್‌ ಖಾತೆ ವಿವರ, ಜನ್ಮ ದಿನಾಂಕ, ಮೊಬೈಲ್‌ ಸಂಖ್ಯೆ, ಸಾಮಾಜಿಕ ವರ್ಗದಂಥ ಅಗತ್ಯ ವಿವರಗಳನ್ನು ನೀಡಬೇಕು.

ವಲಸೆ ಕಾರ್ಮಿಕರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರದಲ್ಲಿ ಅಥವಾ ಕೇಂದ್ರದ ನಿರ್ವಾಹಕರನ್ನು  ಭೇಟಿ ಮಾಡಿ ನೋಂದಣಿ ಮಾಡಿಕೊಳ್ಳಬಹುದು.

ಪ್ರಯೋಜನವೇನು? :

ಇ- ಶ್ರಮ್‌ ಪೋರ್ಟಲ್‌ನಲ್ಲಿ ನೋಂದಣಿ ಮಾಡುವುದರಿಂದ ಕಾರ್ಮಿಕರಿಗೆ 2 ಲಕ್ಷ ರೂ. ವರೆಗೆ ಅಪಘಾತ ವಿಮಾ ರಕ್ಷಣೆ ಯೋಜನೆ, ಪಿಎಂ ಸುರûಾ ವಿಮಾ ಯೋಜನೆಯಲ್ಲಿ ವಾರ್ಷಿಕ 12 ರೂ. ಪ್ರೀಮಿಯಂನಲ್ಲಿ ಒಂದು ವರ್ಷದ ವಿನಾಯಿತಿಯನ್ನೂ ನೀಡುವ ಪ್ರಸ್ತಾವವಿದೆ. ಅಸಂಘಟಿತ ಮತ್ತು ವಲಸೆ ಕಾರ್ಮಿಕರ ಡೇಟಾಬೇಸ್‌ ಅನ್ನು ಆಧಾರ್‌ನೊಂದಿಗೆ ಲಿಂಕ್‌ ಮಾಡುವುದರಿಂದ ಸರಕಾರದ ವಿವಿಧ ಯೋಜನೆಗಳನ್ನು ಅರ್ಹ ಫ‌ಲಾನುಭವಿಗಳ ಮನೆಬಾಗಿಲಿಗೆ ತಲುಪಿಸಲು ಸಾಧ್ಯವಾಗುವುದು.

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.