ಅಂತಾರಾಷ್ಟ್ರೀಯ ಗಡಿಯಲ್ಲಿ ಡ್ರೋನ್ ಹಾರಾಟ: ಗುಂಡಿನ ದಾಳಿ ನಂತರ ಪಾಕ್ ಗೆ ಮರಳಿದ ಡ್ರೋನ್
Team Udayavani, Nov 29, 2020, 11:33 AM IST
ಶ್ರೀನಗರ: ಜಮ್ಮು ಕಾಶ್ಮೀರದ ಆರ್ ಎಸ್ ಪುರ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿಯಲ್ಲಿ ಡ್ರೋನ್ ವೊಂದು ಹಾರಾಟ ನಡೆಸಿದ್ದು, ಬಿಎಸ್ ಎಫ್ ಸೈನಿಕರು ಗುಂಡಿನ ಹಾರಿಸಿದ ಬಳಿಕ ಡ್ರೋನ್ ಪಾಕಿಸ್ಥಾನಕ್ಕೆ ಮರಳಿದೆ.
ಶನಿವಾರ ರಾತ್ರಿ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
“ಜಮ್ಮು ಮತ್ತು ಕಾಶ್ಮೀರದ ಆರ್ ಎಸ್ ಪುರಾ ಸೆಕ್ಟರ್‌ನ ಅರ್ನಿಯಾ ಪ್ರದೇಶದ ಅಂತಾರಾಷ್ಟ್ರೀಯ ಗಡಿಯಲ್ಲಿ ನಿನ್ನೆ ರಾತ್ರಿ ಡ್ರೋನ್ ಕಾಣಿಸಿಕೊಂಡಿದೆ. ಬಿಎಸ್ಎಫ್ ಸೈನಿಕರು ಅದರ ಮೇಲೆ ಗುಂಡು ಹಾರಿಸಿದ ನಂತರ ಅದು ಪಾಕಿಸ್ತಾನದ ಕಡೆಗೆ ಹಿಂತಿರುಗಿತು” ಎಂದು ಬಿಎಸ್ಎಫ್ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
ಒಂದು ವಾರದ ಹಿಂದೆ ಜಮ್ಮು ಕಾಶ್ಮೀರದ ಪೂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನ ಎಲ್‌ಒಸಿ ಬಳಿ ಹಾರುವ ವಸ್ತುವೊಂದನ್ನು ಗುರುತಿಸಲಾಗಿತ್ತು. ಅದು ಕೂಡಾ ಭಾರತ ಭೂಪ್ರದೇಶದ ಮೇಲೆ ಹಾರಾಟ ನಡೆಸಿತ್ತು. ಇದಾಗಿ ಕೆಲವೇ ದಿನಗಳ ಬಳಿಕ ಡ್ರೋನ್ ಹಾರಾಟ ನಡೆಸಿದೆ.
ಇದನ್ನೂ ಓದಿ:‘ಪ್ರವಾದಿಗಳಿಗೆ ಕೋಪ ಬಂದರೆ ಒಂದೇ ಶಿಕ್ಷೆ’: ಮಂಗಳೂರಿನಲ್ಲಿ ಮತ್ತೆ ವಿವಾದಾತ್ಮಕ ಗೋಡೆ ಬರಹ
ಕಳೆದ ತಿಂಗಳು, ಜಮ್ಮು ಮತ್ತು ಕಾಶ್ಮೀರದ ಕೇರನ್ ವಲಯದಲ್ಲಿ ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನ ಸೇನೆಯ ಕ್ವಾಡ್‌ಕಾಪ್ಟರ್ ಅನ್ನು ಭಾರತೀಯ ಸೇನೆಯು ಹೊಡೆದುರುಳಿಸಿತ್ತು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ಸ್ವಾತಂತ್ರ್ಯ ಸೇನಾನಿ “ಅಹ್ಮದುಲ್ಲಾ ಶಾ’ ಹೆಸರು
ರೈತರು ಕೃಷಿ ಕಾನೂನುಗಳನ್ನು ಮುರಿಯುತ್ತಾರೆ : ಶರದ್ ಪವಾರ್
ಲಸಿಕೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ
ಉತ್ತರ ಭಾರತದಲ್ಲಿ ಮುಂದುವರಿದ ಹಿಮಪಾತ; ಕೆಲವೆಡೆ ಆರೆಂಜ್ ಅಲರ್ಟ್
ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ “AAP” ಅಖಾಡಕ್ಕೆ; 160 ಅಭ್ಯರ್ಥಿ ಹೆಸರು ಘೋಷಣೆ