ಕರಣ್ ಪಾರ್ಟಿಯಲ್ಲಿ ಡ್ರಗ್ಸ್?
Team Udayavani, Aug 1, 2019, 5:13 AM IST
ಮುಂಬೈ: ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ತನ್ನ ಮನೆಯಲ್ಲಿ ಇತ್ತೀಚೆಗೆ ನಡೆಸಿದ ಪಾರ್ಟಿಯಲ್ಲಿ ಬಾಲಿವುಡ್ ನಟ ನಟಿಯರು ಡ್ರಗ್ಸ್ ಸೇವಿಸಿದ್ದರೇ? ಇಂಥದ್ದೊಂದು ಭಾರಿ ವಿವಾದ ಈಗ ಹುಟ್ಟಿಕೊಂಡಿದೆ. ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಇತ್ತೀಚೆಗೆ ಕರಣ್ ಜೋಹರ್ ವಿಡಿಯೋ ಪ್ರಕಟಿಸಿಕೊಂಡಿದ್ದರು. ಶನಿವಾರ ರಾತ್ರಿಯ ಖುಷಿ ಎಂಬ ಅರ್ಥದ ಶೀರ್ಷಿಕೆಯನ್ನೂ ಇದಕ್ಕೆ ನೀಡಿದ್ದರು.
ಈ ಪಾರ್ಟಿಯಲ್ಲಿ ಬಾಲಿವುಡ್ ತಾರೆಯರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ವಿಕ್ಕಿ ಕೌಶಲ್, ಅರ್ಜುನ್ ಕಪೂರ್, ಮಲೈಕಾ ಅರೋರಾ, ಶಾಹಿದ್ ಕಪೂರ್, ನಿರ್ಮಾಪಕ ಅಯಾನ್ ಮುಖರ್ಜಿ ಸೇರಿದಂತೆ ಹಲವರು ಇದ್ದರು. ಈ ವಿಡಿಯೋ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಪಾರ್ಟಿಯಲ್ಲಿ ತಾರೆಯರು ಡ್ರಗ್ಸ್ ಸೇವಿಸಿದ್ದಾರೆ ಎಂದು ಶಿರೋಮಣಿ ಅಕಾಲಿ ದಳ ಶಾಸಕ ಮಜಿಂದರ್ ಸಿರ್ಸಾ ಟ್ವೀಟ್ ಮಾಡಿ ಆರೋಪಿಸಿದ್ದಾರೆ. ಅದಕ್ಕೆ ಕಾಂಗ್ರೆಸ್ ಮುಖಂಡ ಮಿಲಿಂದ್ ದೇವುರಾ ಪ್ರತಿಕ್ರಿಯಿಸಿ, ಸಿರ್ಸಾ ಆರೋಪವನ್ನು ಅಲ್ಲಗಳೆದಿದ್ದಾರೆ. ನನ್ನ ಪತ್ನಿಯೂ ಈ ಪಾರ್ಟಿಯಲ್ಲಿದ್ದರು. ಅವರು ವಿಡಿಯೋದಲ್ಲೂ ಕಾಣಿಸುತ್ತಿದ್ದಾರೆ. ಯಾರೂ ಈ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ