ಕುಡಿದ ಅಮಲು; ವಿಮಾನದೊಳಗೆ ಮಹಿಳಾ ಆಸನದ ಮೇಲೆ ಮೂತ್ರ ವಿಸರ್ಜನೆ!
Team Udayavani, Sep 1, 2018, 2:46 PM IST
ನವದೆಹಲಿ: ವಿಮಾನದಲ್ಲಿ ರಂಪಾಟ, ಜಗಳ ಮಾಡಿಕೊಳ್ಳುವುದು ನಡೆಯುತ್ತಿರುತ್ತದೆ. ಆದರೆ ಕುಡಿದ ಅಮಲಿನಲ್ಲಿ ಪ್ರಯಾಣಿಕನೊಬ್ಬ ವಿಮಾನದಲ್ಲಿ ಮಹಿಳೆಯೊಬ್ಬರ ಸೀಟ್ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನದಲ್ಲಿ ನಡೆದಿದ್ದು, ಈ ಘಟನೆ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯ ವರದಿ ನೀಡುವಂತೆ ಸೂಚಿಸಿದೆ.
ಆಗಸ್ಟ್ 30ರಂದು ನ್ಯೂಯಾರ್ಕ್ ನಿಂದ ದೆಹಲಿಗೆ ಹೊರಟಿದ್ದ ವಿಮಾನದಲ್ಲಿ ಈ ಘಟನೆ ನಡೆದಿತ್ತು. ಮಹಿಳಾ ಪ್ರಯಾಣಿಕರ ಮಗಳಾದ ಇಂದ್ರಾಣಿ ಘೋಷ್ ಅವರು ಘಟನೆ ಬಗ್ಗೆ ಕೇಂದ್ರ ಸಚಿವರಾದ ಸುರೇಶ್ ಪ್ರಭು, ಸುಷ್ಮಾ ಸ್ವರಾಜ್ ಅವರ ಹೆಸರನ್ನು ಟ್ಯಾಗ್ ಮಾಡಿ ಟ್ವೀಟರ್ ನಲ್ಲಿ ಘಟನೆ ಬಗ್ಗೆ ವಿವರಿಸಿದ್ದರು.
ನನ್ನ ತಾಯಿ ನವದೆಹಲಿಯಿಂದ ಒಬ್ಬರೇ ನ್ಯೂಯಾರ್ಕ್ ನತ್ತ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಊಟಕ್ಕೂ ಮೊದಲು ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಸೀಟಿನ ಸುತ್ತಲೂ ಮೂತ್ರ ವಿಸರ್ಜಿಸಿದ್ದರು. ಈ ಬಗ್ಗೆ ಕೂಡಲೇ ಗಮನಹರಿಸಿ ಎಂದು ಘೋಷ್ ಟ್ವೀಟರ್ ನಲ್ಲಿ ಮನವಿ ಮಾಡಿಕೊಂಡಿದ್ದರು.
ಈ ಘಟನೆ ಗಮನಕ್ಕೆ ಬಂದ ಕೂಡಲೇ ಸಚಿವ ಜಯಂತ್ ಸಿನ್ನಾ ಅವರು, ಕೂಡಲೇ ಈ ಬಗ್ಗೆ ಮಾಹಿತಿ ಪಡೆದುಕೊಂಡು ಸಚಿವಾಲಯಕ್ಕೆ ವರದಿ ಕಳುಹಿಸುವಂತೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!