ಕುಡಿದ ಮತ್ತಿನಲ್ಲಿ ಮಹಿಳೆಯ ತಲೆ ಮೇಲೆಯೇ ಮೂತ್ರ ವಿಸರ್ಜನೆ ಮಾಡಿದ ರೈಲಿನ ಟಿಟಿಇ
Team Udayavani, Mar 14, 2023, 2:40 PM IST
ಲಕ್ನೋ: ವಿಮಾನದಲ್ಲಿ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಸುದ್ದಿಯಾದ ಬಳಿಕ ಅಂಥದ್ದೇ ಮತ್ತೊಂದು ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ಇತ್ತೀಚೆಗೆ ನಡೆದಿರುವುದು ಬೆಳಕಿಗೆ ಬಂದಿದೆ.
ಭಾನುವಾರ (ಮಾ.12 ರಂದು) ಅಮೃತಸರದಿಂದ ಕೋಲ್ಕತ್ತಾಕ್ಕೆ ತೆರಳುವ ರೈಲಿನಲ್ಲಿ ಈ ಘಟನೆ ನಡೆದಿದ್ದು, ಅಕಾಲ್ ತಖ್ತ್ ಎಕ್ಸ್ಪ್ರೆಸ್ ರೈಲಿನಲ್ಲಿ ಮಹಿಳೆ ತನ್ನ ಪತಿ ರಾಜೇಶ್ ಕುಮಾರ್ ಅವರೊಂದಿಗೆ ಇದ್ದರು. ದಂಪತಿಗಳು ಎ1 ಕೋಚ್ ನಲ್ಲಿದ್ದರು. ಮಧ್ಯರಾತ್ರಿ ರೈಲಿನ ಟಿಕೆಟ್ ಪರಿವೀಕ್ಷಕ (ಟಿಟಿಇ) ಬಿಹಾರ ಮೂಲದ ಮುನ್ನಾ ಕುಮಾರ್ ಕುಡಿದ ಮತ್ತಿನಲ್ಲಿ ಮಹಿಳೆಯ ತಲೆಯ ಮೇಲೆಯೇ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ ಹೇಳಿದ್ದಾರೆ.
ಟಿಟಿಇಯ ಅಸಭ್ಯ ವರ್ತನೆಗೆ ಮಹಿಳೆ ಕಿರುಚಿದ್ದಾರೆ. ಈ ವೇಳೆ ಎಚ್ಚೆತ ಇತರ ಪ್ರಯಾಣಿಕರು ಒಟ್ಟು ಸೇರಿ ಕುಡಿದು ಟೈಟಾಗಿದ್ದ ಮುನ್ನಾ ಕುಮಾರ್ ನನ್ನು ಹಿಡಿದು ಥಳಿಸಿದ್ದಾರೆ. ಸೋಮವಾರ ರೈಲು ಲಕ್ನೋದ ಚಾರ್ಬಾಗ್ ರೈಲು ನಿಲ್ದಾಣವನ್ನು ತಲುಪಿದಾಗ ಟಿಟಿಇಯನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
MUST WATCH
ಹೊಸ ಸೇರ್ಪಡೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ