Earthquake; ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್ನಲ್ಲಿ ಭೂಕಂಪನ: 5.2 ತೀವ್ರತೆ ದಾಖಲು
Team Udayavani, Aug 5, 2023, 11:06 AM IST
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್ನಲ್ಲಿ ಶನಿವಾರ ಬೆಳಿಗ್ಗೆ ಭೂಕಂಪನ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ವರದಿ ಮಾಡಿದೆ.
ಶನಿವಾರ ಬೆಳಿಗ್ಗೆ 8.36ರ ಸುಮಾರಿಗೆ ಭೂಕಂಪನದ ಅನುಭವಾಗಿದ್ದು ಈ ವೇಳೆ ಮನೆಯೊಳಗಿದ್ದ ಮಂದಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಭೂಕಂಪದ ಕೇಂದ್ರವು ಭೂಮಿಯ ಮೇಲ್ಮೈಯಿಂದ 129 ಕಿಮೀ ಕೆಳಗೆ, ಗುಲ್ಮಾರ್ಗ್ನಿಂದ ಸುಮಾರು 184 ಕಿಮೀ ದೂರದಲ್ಲಿದೆ ಎಂದು ಹೇಳಿದೆ.
ಘಟನೆಯಿಂದ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಅಧಿಕಾರಿಗಳ ಪ್ರಕಾರ, ಈ ವರ್ಷದ ಜೂನ್ನಿಂದ ಇಲ್ಲಿಯವರೆಗೆ ಜಮ್ಮು ಮತ್ತು ಕಾಶ್ಮೀರದ ವಿವಿಧ ಕಡೆಗಳಲ್ಲಿ 12 ಭಾರಿ ಭೂ ಕಂಪನ ಸಂಭವಿಸಿವೆ ಎಂದಿದ್ದಾರೆ.
ಜೂನ್ 13 ರಂದು ದೋಡಾ ಜಿಲ್ಲೆಯಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮನೆಗಳು ಸೇರಿದಂತೆ ಹತ್ತಾರು ಕಟ್ಟಡಗಳು ಬಿರುಕು ಬಿಟ್ಟಿತ್ತು.
ಇದನ್ನೂ ಓದಿ: ನುಹ್ ಹಿಂಸಾಚಾರ: ಇದೊಂದು ಪೂರ್ವ ಯೋಜಿತ ಕೃತ್ಯ… ಹರಿಯಾಣ ಗೃಹ ಸಚಿವರ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ