ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ಮೋದಿ ಫೋಟೋ ತೆಗೆಯಿರಿ: ಚುನಾವಣಾ ಆಯೋಗ ಸೂಚನೆ
Team Udayavani, Mar 6, 2021, 11:44 AM IST
ನವದೆಹಲಿ: ಕೋವಿಡ್-19 ಲಸಿಕಾ ಪ್ರಮಾಣಪತ್ರದಿಂದ ಪ್ರಧಾನಿ ಮೋದಿ ಫೋಟೋವನ್ನು ತೆಗೆಯುವಂತೆ ಚುನಾವಣಾ ಆಯೋಗ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಸೂಚನೆ ನೀಡಿದೆ.
ಪಶ್ಚಿಮಬಂಗಾಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದೆ. ಪ್ರಧಾನಿ ಮೋದಿ ಲಸಿಕೆ ಪಡೆಯುತ್ತಿರುವ ಚಿತ್ರವನ್ನು ಪ್ರಮಾಣಪತ್ರದಲ್ಲಿ ಬಳಸಿ ಪ್ರಚಾರ ತಂತ್ರವನ್ನು ಅನುಸರಿಸುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್(ಟಿಎಂಸಿ) ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ಇದೀಗ ಚುನಾವಣಾ ಆಯೋಗ ಆರೋಗ್ಯ ಸಚಿವಾಲಯಕ್ಕೆ ನೀಡಿದ ಸೂಚನೆಯಲ್ಲಿ ಚುನಾವಣಾ ನೀತಿ ಸಂಹಿತೆಯ ಕೆಲವು ನಿಬಂಧನೆಗಳು ಉಲ್ಲಂಘನೆಯಾಗಿರುವ ಬಗ್ಗೆ ಉಲ್ಲೇಖ ಮಾಡಿದ್ದು, ಸಾರ್ವಜನಿಕ ಬೊಕ್ಕಸದ ವೆಚ್ಚದಲ್ಲಿ ಜಾಹೀರಾತಿನ ಬಳಕೆಗೆ ನಿರ್ಬಂಧ ಹೇರಿದೆ.
ಇದನ್ನೂ ಓದಿ: ಕೈಕೊಟ್ಟ ಅದೃಷ್ಟ: ಅಜೇಯರಾದರೂ ಶತಕ ವಂಚಿತ ವಾಷಿಂಗ್ಟನ್, ಭಾರತಕ್ಕೆ ಉತ್ತಮ ಮುನ್ನಡೆ
ಪಿಟಿಐ ವರದಿಯ ಪ್ರಕಾರ, ಚುನಾವಣಾ ಆಯೋಗವು ಯಾವುದೇ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಿಲ್ಲ. ಆದರೇ ಮುಂಬರುವ ಚುನಾವಣೆ ಹಿನ್ನಲೆಯಲ್ಲಿ, ನೀತಿ ಸಂಹಿತೆಯನ್ನು ಪಾಲಿಸುವಂತೆ ಆರೋಗ್ಯ ಸಚಿವಾಲಯಕ್ಕೆ ಸೂಚಿಸಿದೆ.
ಪಶ್ಚಿಮಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ರಾಜ್ಯಗಳಲ್ಲಿ, ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಚುನಾವಣೆ ನಡೆಯಲಿದ್ದು, ಇದೀಗ ಆರೋಗ್ಯ ಸಚಿವಾಲಯ, ಪ್ರಧಾನಿ ಮೋದಿ ಚಿತ್ರವನ್ನು ಕೋವಿಡ್-19 ಪ್ರಮಾಣಪತ್ರದಿಂದ ತೆಗೆಯಲು ಮುಂದಾಗಿದೆ ಎಂದು ವರದಿ ತಿಳಿಸಿದೆ.
ಟಿಎಂಸಿ ಪಕ್ಷದ ಸಂಸದ ಡೆರೇಕ್ ಓ ಬ್ರಯಾನ್ ಮಂಗಳವಾರ(ಮಾ. 3) ಚುನಾವಣಾ ಆಯೋಗಕ್ಕೆ ಪತ್ರ ಬರೆದು ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತಿದೆ ಎಂದು ದೂರು ಸಲ್ಲಿಸಿದ್ದರು.
ಇದನ್ನೂ ಓದಿ: ಬಂಟ್ವಾಳ: ಕತ್ತಿಯಿಂದ ಹಲ್ಲೆ ನಡೆಸಿ ಗಂಡನನ್ನೇ ಕೊಂದ ಪತ್ನಿ! ಪೊಲೀಸ್ ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್