ಆರ್ಥಿಕ ಸಮೀಕ್ಷೆ ವರದಿ ಮಂಡನೆ; 2019ರಲ್ಲಿ ಶೇ.7-7.5 GDP ನಿರೀಕ್ಷೆ
Team Udayavani, Jan 29, 2018, 5:02 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೋಮವಾರದಿಂದ ಲೋಕಸಭೆಯಲ್ಲಿ ಆರಂಭಗೊಂಡ ಬಜೆಟ್ ಅಧಿವೇಶನದಲ್ಲಿ 2017-2018ರ ಸಾಲಿನ ಆರ್ಥಿಕ ಸಮೀಕ್ಷೆಯನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.
ಆರ್ಥಿಕ ಸಮೀಕ್ಷೆ ಪ್ರಕಾರ, 2018-19ರ ಸಾಲಿನಲ್ಲಿ ದೇಶದ ಜಿಡಿಪಿ(ಒಟ್ಟು ರಾಷ್ಟ್ರೀಯ ಉತ್ಪನ್ನ) ಶೇ.7ರಿಂದ ಶೇ.7.5ರವರೆಗೆ ಬೆಳವಣಿಗೆ ನಿರೀಕ್ಷಿಸಲಾಗಿದೆ. ದೇಶದ ಆರ್ಥಿಕ ಸ್ಥಿತಿಗತಿಯನ್ನು ವಿವರಿಸುವ ಸಮೀಕ್ಷೆಯನ್ನು ಮಂಡಿಸಲಾಗಿದೆ ಎಂದು ಜೇಟ್ಲಿ ಸದನದಲ್ಲಿ ಮಾತನಾಡುತ್ತ ಹೇಳಿದರು.
ಪ್ರಸಕ್ತ ಸಾಲಿನ ಮಾರ್ಚ್ ಅಂತ್ಯದೊಳಗೆ ದೇಶದ ಜಿಡಿಪಿ ಶೇ.6.75ರಷ್ಟು ಬೆಳವಣಿಗೆ ಕಾಣಲಿದೆ ಎಂದು ಆರ್ಥಿಕ ಸಮೀಕ್ಷೆಯಲ್ಲಿ ತಿಳಿಸಿದೆ. 2018-19ರ ಸಾಲಿನಲ್ಲಿ ಜಿಡಿಪಿ ಏರಿಕೆ ಕಾಣುವ ನಿಟ್ಟಿನಲ್ಲಿ ಈ ಹಿಂದಿನ ವರ್ಚಗಳಲ್ಲಿ ಪ್ರಮುಖ ಸುಧಾರಣೆಗಳನ್ನು ತರಲಾಗಿದೆ. ಈ ಹಿನ್ನೆಲೆಯಲ್ಲಿ ಜಗತ್ತಿನಲ್ಲಿ ವೇಗದ ಆರ್ಥಿಕ ಬೆಳವಣಿಗೆ ಕಾಣುತ್ತಿರುವ ಸಾಲಿನಲ್ಲಿ ಭಾರತ ನಿಂತಿದೆ.
ನೋಟು ಅಮಾನ್ಯೀಕರಣ ಮತ್ತು ಜಿಎಸ್ಟಿ ಜಾರಿ ಬಳಿಕ 18 ಲಕ್ಷ ಹೊಸ ತೆರಿಗೆದಾರರು ಸೇರ್ಪಡೆಯಾಗಿದ್ದು, ಪರೋಕ್ಷ ತೆರಿಗೆದಾರರ ಸಂಖ್ಯೆ ಶೇ.50ರಷ್ಟು ಹೆಚ್ಚಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ