ಟಿಎಂಸಿ 13 ನಾಯಕರ ವಿರುದ್ಧ ಪ್ರಕರಣ
Team Udayavani, Apr 29, 2017, 1:46 AM IST
ಹೊಸದಿಲ್ಲಿ: ನಾರದಾ ಸ್ಟಿಂಗ್ ಕಾರ್ಯಾಚರಣೆಗೆ ಸಂಬಂಧಪಟ್ಟಂತೆ ಸಂಸದರಾದ ಸೌಗತಾ ರಾಯ್, ಮುಕುಲ್ ರಾಯ್, ಸುಲ್ತಾನ್ ಅಹ್ಮದ್ ಸೇರಿದಂತೆ ತೃಣಮೂಲ ಕಾಂಗ್ರೆಸ್‌ನ 13 ಮಂದಿ ನಾಯಕರ ವಿರುದ್ಧ ಹಣಕಾಸು ಅವ್ಯವಹಾರ ನಿಯಂತ್ರಣ ಕಾಯ್ದೆಯನ್ವಯ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿದೆ.
ಸಿಬಿಐ ಸಲ್ಲಿಕೆ ಮಾಡಿದ್ದ ಎಫ್ಐಆರ್ ಆಧಾರದಲ್ಲಿ ಈ ಕ್ರಮ ಜರುಗಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೇಳಿದ್ದಾರೆ. ಆರೋಪಿಗಳಿಗೆ ಆದಷ್ಟು ಬೇಗ ಸಮನ್ಸ್ ಜಾರಿ ಮಾಡುವುದಾಗಿಯೂ ಅವರು ತಿಳಿಸಿದ್ದಾರೆ. ಕೆಲವು ಸಚಿವರು, ಶಾಸಕರು ಮತ್ತು ಸಂಸದರು ಹಣ ಸ್ವೀಕರಿಸುತ್ತಿರುವ ದೃಶ್ಯಗಳು 2016ರ ಚುನಾವಣೆಗೆ ಮುನ್ನ ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿದ್ದವು. ಅನಂತರ, ಇದು ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿತ್ತು. ಕೇಂದ್ರದ ನರೇಂದ್ರ ಮೋದಿ ಸರಕಾರ ಸೇಡಿನ ರಾಜಕೀಯಕ್ಕೆ ಇದನ್ನು ಬಳಕೆ ಮಾಡಿಕೊಂಡು ನಮ್ಮ ಮೇಲೆ ಇಲ್ಲಸಲ್ಲದ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ ಎಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದರು. ಇದು ರಾಜ್ಯ, ಕೇಂದ್ರದ ನಡುವೆ ವಾಕ್ಸಮರಕ್ಕೂ ದಾರಿ ಮಾಡಿಕೊಟ್ಟಿತ್ತು.