
Education ಗುಲಾಮಿ ಚಿಂತನೆಯನ್ನು ತುರುಕುತ್ತೀರಾ?:ಸಿಎಂ ಸಿದ್ದರಾಮಯ್ಯರಿಗೆ ಸುನಿಲ್ ಪ್ರಶ್ನೆ
ಶಾಲಾ ಪಠ್ಯದಲ್ಲಿ ನಕಲಿ ಗಾಂಧಿ ಕುಟುಂಬದ ಚರಿತ್ರೆ, ವಿದೇಶಿ ದಾಳಿಯ ವಿಕೃತಿಗಳು ಮಾತ್ರ ತುಂಬಿರಬೇಕಲ್ಲವೇ ?
Team Udayavani, Jun 7, 2023, 6:47 PM IST

ಬೆಂಗಳೂರು: ”ನಿಮ್ಮನ್ನು ಎರಡನೇ ಬಾರಿಗೆ ಮುಖ್ಯಮಂತ್ರಿ ಮಾಡಿದ್ದಾರೆಂಬ ಋಣ ತೀರಿಸಿಕೊಳ್ಳುವುದಕ್ಕಾಗಿ ಗುಲಾಮಿ ಚಿಂತನೆಯನ್ನು ಶಿಕ್ಷಣದಲ್ಲಿ ತುರುಕುತ್ತೀರಾ ?” ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ, ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಸರಣಿ ಟ್ವೀಟ್ ಗಳ ಮೂಲಕ ಪ್ರಶ್ನಿಸಿದ್ದಾರೆ.
”ಅಧಿಕಾರಕ್ಕೆ ಬಂದು ತಿಂಗಳು ಕಳೆಯುವಷ್ಟರಲ್ಲೇ ಸಿದ್ದರಾಮಯ್ಯ ಸರ್ಕಾರ ಪಠ್ಯ-ಪುಸ್ತಕ ಪರಿಷ್ಕರಣೆಗೆ ಕೈ ಹಾಕಿದೆ.ಪಠ್ಯದಲ್ಲಿ ಭಾರತೀಯತೆ, ಸಂಸ್ಕ್ರತಿ ಹಾಗೂ ಇತಿಹಾಸದ ನೈಜ್ಯ ಸತ್ಯಗಳೇನು ಎಂಬುದು ವಿದ್ಯಾರ್ಥಿಗಳಿಗೆ ತಿಳಿಯದಂತೆ ಮುಚ್ಚಿಡುವುದು ಸರ್ಕಾರದ ಉದ್ದೇಶವೇ ? ಶಾಲೆಗಳಿಗೆ ಪಠ್ಯ- ಪುಸ್ತಕ ಪೂರೈಕೆಯಾದ ನಂತರ ಪರಿಷ್ಕರಣೆಯ ಹಟವೇಕೆ? ಎಂದು ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.
ಮಾನ್ಯ ಸಿದ್ದರಾಮಯ್ಯನವರೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಇಲಾಖೆಯ ಇತರೆ ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುವುದಕ್ಕಾದರೂ ಅವಕಾಶ ಕೊಡಿ. ಅದನ್ನು ಬಿಟ್ಟು ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಕಲಿಸುವ ಪಾಠ ಯಾವುದೆಂದು ನಿರ್ಧರಿಸಿ ಎಂದು ನೀವು ಪಾಠ ಮಾಡಬೇಡಿ. ನಾನು ಮೇಷ್ಟ್ರಾಗಿದ್ದೆ ಕಣ್ರಿ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡುವುದಕ್ಕೆ ಮುನ್ನ ವಿದ್ಯಾರ್ಥಿ ಹಾಗೂ ಶಿಕ್ಷಕರ ಸಮಸ್ಯೆ ಮೊದಲು ಅರ್ಥ ಮಾಡಿಕೊಳ್ಳಿ. ಪಠ್ಯ ಪರಿಷ್ಕರಣೆ ಬಗ್ಗೆ ನಿಮಗಿರುವ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು ನಿಯಂತ್ರಿಸುತ್ತಿರುವ ಅನುಮಾನ ಬರುತ್ತಿದೆ.ಸಿದ್ದರಾಮಯ್ಯನವರೇ ನಿಮಗೆ ಶ್ರೇಷ್ಠ ಭಾರತೀಯ ಚಿಂತನೆಗಳು, ನಿಜವಾದ ಆದರ್ಶ ಪುರುಷ ಯಾರಾಗಬೇಕು ? ತಾಯಿ ಭಾರತೀಯ ಅಮರಪುತ್ರರು ಎಂಬ ವಿಚಾರಗಳು ಹೇಗೆ ಇಷ್ಟವಾಗುತ್ತದೆ ಹೇಳಿ? ನಿಮ್ಮ ದೃಷ್ಟಿಯಲ್ಲಿ ಶಾಲಾ ಪಠ್ಯದಲ್ಲಿ ನಕಲಿ ಗಾಂಧಿ ಕುಟುಂಬದ ಚರಿತ್ರೆ, ವಿದೇಶಿ ದಾಳಿಯ ವಿಕೃತಿಗಳು ಮಾತ್ರ ತುಂಬಿರಬೇಕಲ್ಲವೇ ? ಎಂದು ಟ್ವೀಟ್ ಗಳ ಮೂಲಕ ಸರಕಾರದ ನಿರ್ಧಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cop Arrested: ಭ್ರಷ್ಟಾಚಾರ, ಉಗ್ರರ ಜೊತೆ ನಂಟು: ಜಮ್ಮು- ಕಾಶ್ಮೀರದ ಪೊಲೀಸ್ ಅಧಿಕಾರಿ ಬಂಧನ

Shocking: ಕುಟುಂಬ ಸದಸ್ಯರ ಎದುರೇ 3 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ದರೋಡೆ

Women’s Bill Passes… ಪ್ರಧಾನಿ ಮೋದಿಗೆ ‘ನಾರಿ ಶಕ್ತಿ’ಯಿಂದ ಅಭಿನಂದನೆಗಳ ಮಹಾಪೂರ

BJP ಜತೆಗಿನ ಮೈತ್ರಿಯಲ್ಲಿ ತೊಂದರೆ ಇಲ್ಲ: ಎಐಎಡಿಎಂಕೆ

NEET, ಅರ್ಹತೆಗೆ ಸಂಬಂಧವಿಲ್ಲ: ಸ್ಟಾಲಿನ್
MUST WATCH
ಹೊಸ ಸೇರ್ಪಡೆ

Sirsi: ಅಕ್ರಮ ಸ್ಪಿರಿಟ್ ಸಾಗಾಟ; 2.97 ಲಕ್ಷ ರೂ. ಮೌಲ್ಯದ ಸ್ಪಿರಿಟ್ ನಾಶ

Vinay Rajkumar; ಆಡಿಯೋ ಖುಷಿಯಲ್ಲಿ ಅಂದೊಂದಿತ್ತು ‘ಅದೊಂದಿತ್ತು ಕಾಲ’ ತಂಡ

Apple iPhone 15: ಹರ್ಷ- ಆ್ಯಪಲ್ 15 ಶ್ರೇಣಿಯ ಐಫೋನ್ ಬಿಡುಗಡೆ

Drought Situation; ಹೊರ ರಾಜ್ಯಗಳಿಗೆ ಮೇವು ಸಾಗಾಟ ನಿಷೇಧ: ಸಚಿವ ಕೆ.ವೆಂಕಟೇಶ

Team India; ಆಸೀಸ್ ಸರಣಿಗೆ ರೋಹಿತ್, ವಿರಾಟ್ ಯಾಕಿಲ್ಲ..: ಉತ್ತರಿಸಿದ ಕೋಚ್ ದ್ರಾವಿಡ್