
ತೇಜಸ್ವಿ ಸೂರ್ಯ ಆಕಸ್ಮಿಕವಾಗಿ ಡೋರ್ ಓಪನ್ ಮಾಡಿದ್ದರು!: ಸಚಿವ ಸಿಂದಿಯಾ ಸ್ಪಷ್ಟನೆ
ಆಕಸ್ಮಿಕವಾಗಿ ವಿಮಾನದ ಬಾಗಿಲು ಓಪನ್ ಆಯಿತು... ಕ್ಷಮಾಪಣೆ ಕೋರಿದರು
Team Udayavani, Jan 18, 2023, 10:37 PM IST

ನವದೆಹಲಿ: ಕಳೆದ ತಿಂಗಳು ಇಂಡಿಗೋ ವಿಮಾನದ ತುರ್ತು ನಿರ್ಗಮನ ದ್ವಾರವನ್ನು ತೆರೆದಿದ್ದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಎಂಬುದನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಒಪ್ಪಿಕೊಂಡಿದ್ದಾರೆ. ಅಲ್ಲದೇ, ಬುಧವಾರ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಂದಿಯಾ, “ಅಂದು ಆಕಸ್ಮಿಕವಾಗಿ ವಿಮಾನದ ಬಾಗಿಲು ಓಪನ್ ಆಯಿತು. ಕೂಡಲೇ ಎಲ್ಲ ರೀತಿಯಲ್ಲೂ ಪರಿಶೀಲನೆ ನಡೆಸಿದ ಬಳಿಕವೇ ಟೇಕಾಫ್ಗೆ ಅವಕಾಶ ಕಲ್ಪಿಸಲಾಯಿತು. ಅಲ್ಲದೇ, ತೇಜಸ್ವಿ ಸೂರ್ಯ ಅವರೇ ಈ ವಿಚಾರವನ್ನು ಗಮನಕ್ಕೆ ತಂದು, ಕ್ಷಮಾಪಣೆ ಕೋರಿದರು’ ಎಂದು ಹೇಳಿದ್ದಾರೆ.
“ಸಂಸದ ತೇಜಸ್ವಿ ಸೂರ್ಯ ಅವರು ಇಂಥ ಗಂಭೀರ ಪ್ರಮಾದ ಮಾಡಿದ್ದರೂ ಅವರು ಕ್ಷಮೆ ಕೇಳಿದೊಡನೆ ಬಿಟ್ಟುಬಿಟ್ಟಿದ್ದೇಕೆ? ಅವರ ವಿರುದ್ಧ ಕ್ರಮ ಕೈಗೊಂಡಿಲ್ಲವೇಕೆ’ ಎಂದು ಪ್ರತಿಪಕ್ಷಗಳ ಹಲವು ನಾಯಕರು ಹಾಗೂ ಜನಸಾಮಾನ್ಯರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ ಬೆನ್ನಲ್ಲೇ ಸಚಿವ ಸಿಂದಿಯಾ ಈ ಸ್ಪಷ್ಟನೆ ನೀಡಿದ್ದಾರೆ. ಬುಧವಾರ ಟ್ವಿಟರ್‌ನಲ್ಲಿ “ತೇಜಸ್ವಿ ಸೂರ್ಯ’ ಎಂಬ ಹ್ಯಾಷ್‌ಟ್ಯಾಗ್ ಟ್ರೆಂಡಿಂಗ್ ಕೂಡ ಆಗಿತ್ತು.
“ಆಟವಾಡುವ ಮಕ್ಕಳಿಗೆ ಉನ್ನತ ಸ್ಥಾನಮಾನ ಕೊಟ್ಟರೆ ಏನಾಗಬಹುದು ಎನ್ನುವುದಕ್ಕೆ ತೇಜಸ್ವಿ ಸೂರ್ಯ ಅವರೇ ಅತ್ಯುತ್ತಮ ಉದಾಹರಣೆ. ಪ್ರಯಾಣಿಕರ ಜೀವದ ಜೊತೆ ಆಟವಾಡುವುದು ಎಷ್ಟು ಸರಿ? ಸಂಸದರ ಉದ್ದೇಶ ಏನಿತ್ತು’ ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!

Borewell: ಆಟ ಆಡುವ ವೇಳೆ 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಮಗು

Fraud: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 3.30 ಲಕ್ಷ ರೂ. ವಂಚನೆ

India-Australia: ಟೆಸ್ಟ್ ವಿಶ್ವಕಪ್ ಫೈನಲ್ ಓವರ್ ಟು ಓವಲ್…

BJP: ವಿಪಕ್ಷ ನಾಯಕನ ಆಯ್ಕೆ- ನಾಳೆ ಅರುಣ್ ಸಿಂಗ್ ಆಗಮನ