Hit & Run: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ವೃದ್ಧ
Team Udayavani, May 27, 2024, 9:34 AM IST
ನೋಯ್ಡಾ: ಪುಣೆಯಲ್ಲಿ ನಡೆದ ಪೋರ್ಶೆ ಕಾರು ಅಪಘಾತ ಪ್ರಕರಣ ಚರ್ಚೆಯಲ್ಲಿರುವಾಗಲೇ ಅಂಥದ್ದೇ ಮತ್ತೊಂದು ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ದುಬಾರಿ ಆಡಿ ಕಾರೊಂದು ರಸ್ತೆ ದಾಟುತ್ತಿದ್ದ ವೃದ್ಧರೊಬ್ಬರಿಗೆ ಢಿಕ್ಕಿ ಹೊಡೆದು ಪರಾರಿ ಆಗಿರುವ ಘಟನೆ ಭಾನುವಾರ(ಮೇ.26 ರಂದು) ಮುಂಜಾನೆ ನಡೆದಿದೆ.
ನೋಯ್ಡಾದ ಸೆಕ್ಟರ್ 24 ಪ್ರದೇಶದ ಕಾಂಚನಜುಂಗಾ ಅಪಾರ್ಟ್ಮೆಂಟ್ ಬಳಿ ಬೆಳಗ್ಗೆ 6.30ಕ್ಕೆ ಜನಕ್ ದೇವ್ ಶಾ ಎಂಬ ವ್ಯಕ್ತಿ ರಸ್ತೆ ದಾಟುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ವೃದ್ಧ ಜನಕ್ ದೇವ್ ಶಾ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ವೃದ್ಧನಿಗ ಢಿಕ್ಕಿ ಹೊಡೆದಿದೆ. ಪರಿಣಾಮ ವೃದ್ಧ ಗಾಳಿಯಲ್ಲಿ ಹಾರಿH ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಕಾರಿನೊಂದಿಗೆ ಚಾಲಕ ಪರಾರಿ ಆಗಿದ್ದಾನೆ. ಸುದ್ದಿ ತಿಳಿದ ನಗರದ ಸೆಕ್ಟರ್ 24 ಪೊಲೀಸ್ ಠಾಣೆಯ ತಂಡ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದೆ.
ಘಟನೆಯ ನಂತರ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಆಡಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ಮುಂದಿನ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ನೋಯ್ಡಾ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆಯಾಗಿದೆ.
NOIDA
ऑडी….रफ्तार…और एक बुजुर्ग जान से हाथ धो बैठे!
निकले थे सैर करने!
कंचनजंगा मार्केट के पास हुआ हादसा!
PS 24@noidapolice pic.twitter.com/JYlhbeYzQT— हिमांशु शुक्ल (@himanshu_kanpur) May 26, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ
Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ
Lok Sabha; ವಿಪಕ್ಷ ನಾಯಕನ ಸ್ಥಾನಕ್ಕೆ ಹೆಸರು ಬಹುತೇಕ ಅಂತಿಮ; ಹುದ್ದೆ ಬೇಡ ಎಂದ ರಾಹುಲ್
Goa Calangute Beach: ಮೊಬೈಲ್,ಬ್ಯಾಗ್ ಕಳ್ಳತನ; ಮೂವರ ಬಂಧನ
Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್
MUST WATCH
ಹೊಸ ಸೇರ್ಪಡೆ
Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ
Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ
Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ
Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್ ಭಸ್ಮ
Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.