ಯಾವುದೇ ಕ್ಷಣದಲ್ಲಿ ಚುನಾವಣೆ ದಿನಾಂಕ


Team Udayavani, Mar 8, 2019, 12:45 AM IST

election-co.jpg

ಹೊಸದಿಲ್ಲಿ: ಯಾವುದೇ ಕ್ಷಣದಲ್ಲಿ ಬೇಕಾದರೂ ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾಗಲಿದೆ.  ಈಗಾಗಲೇ ಸಿದ್ಧತೆ ಪೂರ್ಣಗೊಳಿಸಿಕೊಳ್ಳುವ ಹಂತದಲ್ಲಿರುವ ಕೇಂದ್ರ ಚುನಾವಣಾ ಆಯೋಗ, ಈ ವಾರಾಂತ್ಯ ಅಥವಾ ಮುಂದಿನ ಮಂಗಳವಾರದ ಒಳಗೆ ವೇಳಾಪಟ್ಟಿ ಘೋಷಣೆ ಮಾಡಲಿದೆ ಎಂದು ಮೂಲಗಳು ಹೇಳಿವೆ. ಏಪ್ರಿಲ್‌-ಮೇನಲ್ಲಿ ಏಳರಿಂದ ಎಂಟು ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. 

2014ರಲ್ಲಿ ಮಾ.5 ರಂದೇ ಲೋಕ ಸಮರದ ದಿನಾಂಕ ಘೋಷಣೆಯಾಗಿತ್ತು. ಆದರೆ, ಈ ವರ್ಷ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳನ್ನು ದೃಷ್ಟಿಯಲ್ಲಿಟ್ಟುಕೊಂಡು, ಚುನಾವಣಾ ಆಯೋಗ ದಿನಾಂಕ ಪ್ರಕಟ ಮಾಡುವಲ್ಲಿ ವಿಳಂಬ ಮಾಡುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಈ ಆರೋಪ ಅಲ್ಲಗೆಳೆದಿರುವ ಚುನಾವಣಾ ಆಯೋಗ, ವೇಳಾಪಟ್ಟಿ ಪ್ರಕಟಕ್ಕೆ ಸಾಕಷ್ಟು ಸಮಯವಿದೆ ಎಂದಿದೆ. ಅಲ್ಲದೆ ಪ್ರಧಾನಿಯವರ ವೇಳಾಪಟ್ಟಿ ನೋಡಿಕೊಂಡು ನಾವು ಚುನಾವಣಾ ದಿನಾಂಕ ಘೋಷಣೆ ಮಾಡಲ್ಲ ಎಂದಿದೆ.
 
ಚುನಾವಣಾ ಆಯೋಗದ ಹಿರಿಯ ಅಧಿಕಾರಿ ಪ್ರಕಾರ ಯಾವುದೇ ದಿನ ದಿನಾಂಕ ಘೋಷಣೆ ಮಾಡಬಹುದು. ಏಪ್ರಿಲ್‌ನಲ್ಲಿ ನಡೆಯಲಿದೆ ಎಂದು ಹೇಳಲಾಗುವ ಮೊದಲ ಹಂತದ ಚುನಾವಣೆಗೆ ಮಾಸಾಂತ್ಯದಲ್ಲಿ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆ ಜತೆಗೆ ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ವಿಧಾನಸಭೆಗಳಿಗೂ ಚುನಾವಣೆ ನಡೆಸಲಾಗುತ್ತದೆ. ಅವುಗಳ ಹಾಲಿ ವಿಧಾನಸಭೆ ಅವಧಿ ಮೇ, ಜೂನ್‌ಗೆ ಮುಕ್ತಾಯವಾಗಲಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಈಗಾಗಲೇ ವಿಸರ್ಜನೆಯಾಗಿದೆ. 6 ತಿಂಗಳ ಅವಧಿ ಮೇಗೆ ಮುಕ್ತಾಯವಾಗಲಿದೆ.

ಕೇಂದ್ರ ಚುನಾವಣಾ ಆಯೋಗ ಸೋಮವಾರ, ಮಂಗಳವಾರ ಕಣಿವೆ ರಾಜ್ಯಕ್ಕೆ ಭೇಟಿ ವಿವಿಧ ರಾಜಕೀಯ ಪಕ್ಷಗಳ ಜತೆಗೆ ಸಮಾಲೋಚನೆ ನಡೆಸಿತ್ತು. ಮೂಲಗಳ ಪ್ರಕಾರ ಲೋಕಸಭೆ ಚುನಾವಣೆ ಜತೆಗೇ ಅಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಅದಕ್ಕೆ ಪೂರಕವಾಗಿ ಮುಖ್ಯ ಚುನಾವಣಾ ಆಯುಕ್ತ ಸುನಿಲ್‌ ಅರೋರಾ ಸುಳಿವನ್ನೂ ನೀಡಿದ್ದರು. 
2004ರಲ್ಲಿ ಚುನಾವಣಾ ಆಯೋಗ ಫೆ.29ರಂದು ದಿನಾಂಕ ಪ್ರಕಟಿಸಿ ನಾಲ್ಕು ಹಂತದಲ್ಲಿ ಚುನಾವಣೆ ನಡೆಸಿತ್ತು. 2009ರಲ್ಲಿ ಮಾ.2ರಂದು, 2014ರಲ್ಲಿ ಮಾ.5ರಂದು ದಿನಾಕ ಪ್ರಕಟಿಸಿ 9 ಹಂತದ ಚುನಾವಣೆ ನಡೆಸಿತ್ತು. 

ಟಾಪ್ ನ್ಯೂಸ್

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ ಹೇಳಿಕೆ

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

mugilpete

ಸಂಬಂಧಗಳ ಸುತ್ತ ಮುಗಿಲ್‌ಪೇಟೆ

71aaa

ಅಲ್ಪಸಂಖ್ಯಾತ ಬಾಂಧವರೇ ಕಾಂಗ್ರೆಸ್ ಗೆ ಒಮ್ಮೆ ಪಾಠ ಕಲಿಸಿ:ಹಾನಗಲ್ ನಲ್ಲಿ ಸಿಎಂ

1-wqq

ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬ ಪತ್ತೆಗಾಗಿ 8 ಪೊಲೀಸ್ ತಂಡ

ಶಾಲಾ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಶಾಲಾ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಎತ್ತಿನಭುಜದ ಬಳಿ ಕಾಡಾನೆಗಳ ಹಿಂಡು : ಕಾಡು ಪ್ರಾಣಿಗಳ ಹಾವಳಿಗೆ ಬೆಚ್ಚಿದ ಗ್ರಾಮಸ್ಥರು

ಎತ್ತಿನಭುಜದ ಬಳಿ ಕಾಡಾನೆಗಳ ಹಿಂಡು : ಕಾಡು ಪ್ರಾಣಿಗಳ ಹಾವಳಿಗೆ ಬೆಚ್ಚಿದ ಗ್ರಾಮಸ್ಥರು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ಸಂಪುಟ ರಾಜಿನಾಮೆಗೆ ಪ್ರತಿಪಕ್ಷಗಳ ಆಗ್ರಹ

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ಸಂಪುಟ ರಾಜಿನಾಮೆಗೆ ಪ್ರತಿಪಕ್ಷಗಳ ಆಗ್ರಹ

ಪೆಗಾಸಸ್ ಗೂಢಚರ್ಯೆ; ಸ್ವತಂತ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

ಪೆಗಾಸಸ್ ಗೂಢಚರ್ಯೆ; ಸ್ವತಂತ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

ಕೋವಿಡ್ 19 ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳ; ಬಂಗಾಳ ನಗರದಲ್ಲಿ ಲಾಕ್ ಡೌನ್ ಜಾರಿ

ಕೋವಿಡ್ 19 ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳ; ಬಂಗಾಳ ನಗರದಲ್ಲಿ ಲಾಕ್ ಡೌನ್ ಜಾರಿ

safty belt

ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ?

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ ಹೇಳಿಕೆ

17sugarcane

ಬೈಪಾಸ್‌ ರಸ್ತೆ ನಿರ್ಮಾಣ: ಸುಗಮ ಸಂಚಾರಕ್ಕೆ ಕ್ಷಣಗಣನೆ

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

mugilpete

ಸಂಬಂಧಗಳ ಸುತ್ತ ಮುಗಿಲ್‌ಪೇಟೆ

16school

ಫಲಿತಾಂಶ ಸುಧಾರಣೆಗೆ ಹೊಸ ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.