ಪಕ್ಷಗಳ ಮಾನ್ಯತೆ ರದ್ದು ಅಧಿಕಾರ ಕೊಡಿ: ಇ.ಸಿ.
Team Udayavani, Feb 11, 2018, 8:15 AM IST
ಹೊಸದಿಲ್ಲಿ: ಶಿಕ್ಷೆಗೆ ಒಳಗಾಗಿರುವ ಜನಪ್ರತಿನಿಧಿಗಳು ರಾಜಕೀಯ ಪಕ್ಷ ರಚನೆ ಮಾಡಬಾರದು ಎಂಬ ವಾದಕ್ಕೆ ಬೆಂಬಲ ನೀಡಿರುವ ಕೇಂದ್ರ ಚುನಾವಣಾ ಆಯೋಗ ರಾಜಕೀಯ ಪಕ್ಷಕ್ಕೆ ನೀಡಿರುವ ಮಾನ್ಯತೆ ರದ್ದು ಮಾಡುವ ಅಧಿಕಾರ ನೀಡಬೇಕು ಎಂದು ಸುಪ್ರೀಂಕೋರ್ಟ್ಗೆ ಅರಿಕೆ ಮಾಡಿಕೊಂಡಿದೆ. ಈ ಬಗ್ಗೆ ಅರ್ಜಿ ಸಲ್ಲಿಸಿದ್ದು, ಸೋಮವಾರ ವಿಚಾರಣೆ ನಡೆಯಲಿದೆ.
ಸದ್ಯ ಕೇಂದ್ರ ಚುನಾವಣಾ ಆಯೋಗಕ್ಕೆ ಪಕ್ಷವನ್ನು ನೋಂದಣಿ ಮಾಡುವ ಅಧಿಕಾರ ಮಾತ್ರ ಇದೆ. ಜನಪ್ರಾತಿನಿಧ್ಯ ಕಾಯ್ದೆಯ ಅನ್ವಯ ಈ ನಿಯಮ ಇದೆ. ಪಕ್ಷಗಳಲ್ಲಿ ಆಂತರಿಕವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಯ್ದುಕೊಳ್ಳಬೇಕಾಗಿದೆ. ಅದಕ್ಕಾಗಿ ಕೆಲವೊಂದು ನಿಯಮ ಜಾರಿಗೊಳಿಸಬೇಕಾಗಿದೆ. ಹೀಗಾಗಿ ಇಂಥ ಕ್ರಮ ಅನಿವಾರ್ಯ ಎಂದಿದೆ. ರಾಜಕೀಯ ಪಕ್ಷಗಳ ನೋಂದಣಿ ರದ್ದು ಮಾಡುವ ಬಗ್ಗೆ ಅನುಮತಿ ನೀಡುವಂತೆ 20 ವರ್ಷಗಳಿಂದ ಕೇಂದ್ರಕ್ಕೆ ಮನವಿ ಮಾಡಲಾಗುತ್ತಿದ್ದು, ಪ್ರತಿಕ್ರಿಯೆ ವ್ಯಕ್ತವಾಗಿಲ್ಲ ಎಂದು ಅರ್ಜಿಯಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್