6 ಮಂದಿ ಪೊಲೀಸರನ್ನು ಹತ್ಯೆಗೈದಿದ್ದ ಲಷ್ಕರ್ ಕಮಾಂಡರ್ ಬಶೀರ್ ಫಿನಿಶ್
Team Udayavani, Jul 1, 2017, 11:50 AM IST
ಶ್ರೀನಗರ್:ಕಳೆದ ತಿಂಗಳು ಆರು ಮಂದಿ ಪೊಲೀಸರನ್ನು ಹತ್ಯೆಗೈದಿದ್ದ ಕುಖ್ಯಾತ ಲಷ್ಕರ್ ಎ ತೊಯ್ಬಾದ ಕಮಾಂಡರ್ ಬಶೀರ್ ಲಷ್ಕರಿ ಸೇರಿದಂತೆ ಮೂವರು ಉಗ್ರರು ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಶುಕ್ರವಾರ ಬಲಿಯಾಗಿರುವ ಘಟನೆ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದಿದೆ.
ಲಷ್ಕರ್ ಕಮಾಂಡರ್ ಎನ್ ಕೌಂಟರ್ ಗೆ ಬಲಿಯಾಗಿರುವ ವಿಷಯವನ್ನು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಖಚಿತಪಡಿಸಿದ್ದಾರೆ. ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಮನೆಯೊಂದರಲ್ಲಿ ಬಶೀರ್ ಸೇರಿದಂತೆ ಮೂವರು ಉಗ್ರರು ಅಡಗಿಕೊಂಡಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದಿದ್ದರು. ಲಷ್ಕರ್ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು.
ಈ ಸಂದರ್ಭದಲ್ಲಿ ಭದ್ರತಾ ಪಡೆಗಳು ಕೂಡಾ ಪ್ರತಿದಾಳಿ ನಡೆಸಿದ್ದರು. ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಲಷ್ಕರ್ ಉಗ್ರರು ದಕ್ಷಿಣ ಕಾಶ್ಮೀರದ ಅಚಾಬಾಲ್ ನಲ್ಲಿ ಜೂನ್ 16ರಂದು ಸ್ಟೇಶನ್ ಹೆಡ್ ಆಫೀಸರ್ ಹಾಗೂ ಐವರು ಪೊಲೀಸರನ್ನು ದಾಳಿ ನಡೆಸಿ ಹತ್ಯೆಗೈದಿದ್ದರು. ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆಯ ಕಮಾಂಡರ್ ಬಶೀರ್ ಅಹ್ ವಾನಿ ಅಲಿಯಾಸ್ ಲಷ್ಕರ್ ಆತನ ತಲೆಗೆ ಸರ್ಕಾರ 10 ಲಕ್ಷ ರೂ. ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ