ಆ್ಯಂಬಿಡೆಂಟ್: 10 ಕೋ.ರೂ. ಆಸ್ತಿ ಜಪ್ತಿ
Team Udayavani, Dec 14, 2019, 1:46 AM IST
ಹೊಸದಿಲ್ಲಿ: ಬೆಂಗಳೂರಿನಲ್ಲಿ ಕಳೆದ ವರ್ಷ ಬೆಳಕಿಗೆ ಬಂದ ಆ್ಯಂಬಿಡೆಂಟ್ ಮಾರ್ಕೆಟಿಂಗ್ ಪ್ರೈ.ಲಿ.ನ ವಂಚನೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಶುಕ್ರವಾರ 10 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿಕೊಂಡಿದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿರುವ ಜಮೀನು, ಅಪಾರ್ಟ್ಮೆಂಟ್ಗಳು ಜಪ್ತಿ ಮಾಡಿಕೊಂಡ ಆಸ್ತಿಯಲ್ಲಿ ಸೇರಿವೆ. ವಶಪಡಿಸಿಕೊಂಡಿರುವ ಸ್ಥಿರಾಸ್ತಿಯ ಮೌಲ್ಯ 8.8 ಕೋಟಿ ರೂ. ಆಗಿದ್ದರೆ, ಚರ ಆಸ್ತಿಯ ಮೌಲ್ಯ 1.4 ಕೋಟಿ ರೂ. ಆಗಿದೆ ಎಂದು ಕೇಂದ್ರ ಸಂಸ್ಥೆ ಹೇಳಿದೆ.
ಕಂಪೆನಿಯ ಪ್ರವರ್ತಕರು ಇಸ್ಲಾಮಿಕ್ ಬ್ಯಾಂಕಿಂಗ್ ಅಥವಾ ಹಲಾಲ್ ಹೂಡಿಕೆ ಹೆಸರಲ್ಲಿ ಸಾವಿರಾರು ಮಂದಿಯಿಂದ ಹಣ ಸಂಗ್ರಹಿಸಿ ವಂಚನೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಪ್ರತಿ ತಿಂಗಳಿಗೆ ಶೇ.15ರ ವರೆಗೆ ಲಾಭಾಂಶ ನೀಡುವ ಆಮಿಷ ಒಡ್ಡಿದ್ದರೆಂದು ಇ.ಡಿ. ತಿಳಿಸಿದೆ. ಆರ್ಬಿಐ, ಸೆಬಿಯಿಂದ ಯಾವುದೇ ರೀತಿಯಲ್ಲಿ ಮಾನ್ಯತೆ, ಅನುಮತಿ ಇಲ್ಲದೆ ಅವರು ಕಾರ್ಯವೆಸಗುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್