ಬಹುಮಹಡಿ ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Oct 27, 2019, 2:25 PM IST
ಮುಂಬೈ: ಬಹುಮಹಡಿ ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈ ಪೂರ್ವ ಬಂದುಪ್ ನಲ್ಲಿ ನಡೆದಿದೆ.
ಇಂಜಿನಿಯರಿಂಗ್ ಮೊದಲ ವರ್ಷದ ವಿದ್ಯಾರ್ಥಿನಿ, 15ನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾರೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಸಾವನ್ನಪ್ಪಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಶುಕ್ರವಾರ ರಾತ್ರಿ ಆಕೆಯ ತಂದೆ ಗದರಿಸಿದ್ದು, ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಅದಾಗ್ಯೂ ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದ ತಿಳಿದು ಬರಲಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.