ಏರ್ಪೋರ್ಟ್ಗಳಿಗಿನ್ನು ನಗರಗಳ ಹೆಸರು ಮಾತ್ರ!
Team Udayavani, Feb 10, 2017, 3:45 AM IST
ನವದೆಹಲಿ: ವಿಮಾನ ನಿಲ್ದಾಣಗಳಿಗೆ ಖ್ಯಾತನಾಮರ ಹೆಸರಿಡಬೇಕು ಎಂಬ ಕಿತ್ತಾಟಗಳಿಗೆ ಬ್ರೇಕ್ ಬೀಳಬಹುದು. ಇನ್ನು ದೇಶದಲ್ಲಿ ನಿರ್ಮಾಣವಾಗಿರುವ ಏರ್ಪೋರ್ಟ್ಗಳ ಮರುನಾಮಕರಣ ಅಥವಾ ನಿರ್ಮಾಣವಾಗಲಿರುವ ವಿಮಾನನಿಲ್ದಾಣಗಳಿಗೆ ಹೆಸರಿಡುವಾಗ ಆಯಾ ನಗರಗಳ ಹೆಸರನ್ನು ಇಡಲಾಗುತ್ತದೆಯೇ ಹೊರತು ವ್ಯಕ್ತಿಗಳ ಹೆಸರನ್ನಲ್ಲ ಎಂದು ನಾಗರಿಕ ವಿಮಾನಯಾನ ಸಹಾಯಕ ಸಚಿವ ಜಯಂತ್ ಸಿನ್ಹಾ ಹೇಳಿದ್ದಾರೆ. ಇಂತಹ ಪ್ರಸ್ತಾಪವಿದ್ದು ಸರ್ಕಾರ ಅದರ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಆದಷ್ಟು ಬೇಗ ಈ ಕುರಿತು ಅಂತಿಮ ನಿರ್ಧಾರ ಹೊರಬೀಳಲಿದೆ ಎಂದು ಸಿನ್ಹಾ ತಿಳಿಸಿದ್ದಾರೆ. ಈ ವಿಚಾರದಲ್ಲಿ ಈಗಾಗಲೇ ಆಂತರಿಕ ಚರ್ಚೆಯನ್ನು ನಡೆಸಲಾಗಿದೆ. ನಗರಗಳ ಹೆಸರನ್ನೇ ಇಡೋಣ ಎಂದು ಹೆಚ್ಚಿನವರು ಅಭಿಪ್ರಾಯಪಟ್ಟಿದ್ದಾರೆ ಎಂದರು. ಭಾರತೀಯ ಗಣ್ಯರು, ಸಾಧಕರ ಹೆಸರುಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದೇ ಇರುವಂಥ ವಿದೇಶಿಯರಿಗೆ ನಿಲ್ದಾಣಗಳ ಹೆಸರನ್ನು ಗುರುತಿಸಲು ಕಷ್ಟವಾಗುತ್ತಿದ್ದ ಹಿನ್ನೆಲೆಯಲ್ಲಿ ಇಂತಹ ಪ್ರಸ್ತಾಪ ಸಲ್ಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ