ಎ.1ರಿಂದ ಅಗತ್ಯ ಔಷಧ ದುಬಾರಿ?
Team Udayavani, Mar 24, 2017, 8:48 AM IST
ಹೊಸದಿಲ್ಲಿ: ಅಗತ್ಯ ಔಷಧಗಳ ಬೆಲೆ ಹೆಚ್ಚಿಸುವ ಔಷಧ ಕಂಪೆನಿಗಳ ಬೇಡಿಕೆಗೆ ಕೇಂದ್ರ ಸರಕಾರ ಸಮ್ಮತಿಸಿದ್ದು, ಎ. 1ರಿಂದ ಅಗತ್ಯ ಔಷಧಗಳ ಬೆಲೆ ಶೇ. 2ರಷ್ಟು ಹೆಚ್ಚಳವಾಗಲಿದೆ. ಸಗಟು ಬೆಲೆ ಸೂಚ್ಯಂಕದಲ್ಲಿನ ಬದಲಾವಣೆಗಳಿಗೆ ಅನುಗುಣವಾಗಿ ವಾರ್ಷಿಕ ಬೆಲೆ ಹೆಚ್ಚಳ ಸಂಬಂಧ ದಾಖಲೆ ಒದಗಿಸುವಂತೆ ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ (ಎನ್‌ಪಿಪಿಎ)ವು, ಔಷಧ ಕಂಪೆನಿಗಳಿಗೆ ಸೂಚಿಸಿತ್ತು. ಅದರಂತೆ 2016ರಲ್ಲಿ ಸಗಟು ಬೆಲೆ ಸೂಚ್ಯಂಕದಲ್ಲಿ ವಾರ್ಷಿಕ ಶೇ.1.97 ಬೆಲೆ ಏರಿಕೆಯಾಗಿರುವುದಾಗಿ ಆರ್ಥಿಕ ಸಲಹಾ ಮಂಡಳಿ ವರದಿ ನೀಡಿದೆ. ಕ್ಯಾನ್ಸರ್, ಮಧುಮೇಹ, ಅಧಿಕ ರಕ್ತದೊತ್ತಡ, ಕಿಡ್ನಿ ಕಾಯಿಲೆ ಸಹಿತ ಇತರ ಸಮಸ್ಯೆಗಳಿಗೆ ಸಂಬಂಧಿಸಿದ ಅಗತ್ಯ ಔಷಧಗಳನ್ನು ಒಳಗೊಂಡ ರಾಷ್ಟ್ರೀಯ ಪಟ್ಟಿಯಲ್ಲಿರುವ 875 ಔಷಧಗಳ ಬೆಲೆಗಳನ್ನು ಸರಕಾರ ನೇರವಾಗಿ ನಿಯಂತ್ರಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ