ಚಿದುಗೆ ಕಾದಿದೆಯೇ ಫೋರ್ಜರಿ ಉರುಳು?

ನಕಲು ಪ್ರಕರಣದಲ್ಲೂ ತನಿಖೆ: ಸಿಬಿಐ

Team Udayavani, Sep 28, 2019, 5:58 AM IST

w-34

ಹೊಸದಿಲ್ಲಿ: ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದಲ್ಲಿ ಇನ್ನೂ ಜಾಮೀನು ಸಿಗದೇ ತಿಹಾರ್‌ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಪಿ.ಚಿದಂಬರಂಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಫೋರ್ಜರಿ(ನಕಲು) ಪ್ರಕರಣವೊಂದಕ್ಕೆ ಸಂಬಂಧಿಸಿಯೂ ಚಿದಂಬರಂ ವಿರುದ್ಧ ತನಿಖೆ ನಡೆಸುವುದಾಗಿ ಸಿಬಿಐ ಶುಕ್ರವಾರ ದಿಲ್ಲಿ ಹೈಕೋರ್ಟ್‌ಗೆ ತಿಳಿಸಿದೆ.

ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಈ ವಿಚಾರ ತಿಳಿಸಿದ್ದು, ಚಿದು ವಿರುದ್ಧ ಫೋರ್ಜರಿ ಕೇಸಿಗೆ ಸಂಬಂಧಿಸಿಯೂ ತನಿಖೆ ನಡೆಸುತ್ತಿದ್ದೇವೆ. ಇದು ಸಾಬೀತಾದರೆ 10 ವರ್ಷಗಳ ಜೈಲು ಶಿಕ್ಷೆಯಾಗುತ್ತದೆ. ಆದರೆ, ಇಲ್ಲಿ ಶಿಕ್ಷೆಯ ಪ್ರಮಾಣಕ್ಕಿಂತಲೂ ಹೆಚ್ಚಾಗಿ, ಇಂಥ ಅಪರಾಧವು ಆರ್ಥಿಕ ಸ್ಥಿರತೆ, ಆರ್ಥಿಕತೆ, ಸಂಸ್ಥೆಗಳು ಮತ್ತು ಸಮಾಜದ ಮೇಲೆ ಬೀರುವ ಪರಿಣಾಮವನ್ನು ನಾವು ಗಮನಿಸಬೇಕಾ ಗುತ್ತದೆ ಎಂದು ಹೇಳಿದ್ದಾರೆ. ಆದರೆ, ಫೋರ್ಜರಿ ಕೇಸಿನ ಕುರಿತು ಹೆಚ್ಚಿನ ಮಾಹಿತಿ ನೀಡಿಲ್ಲ.

ಇಂದ್ರಾಣಿ ಭೇಟಿ ನಿರಾಕರಣೆ: ಇದೇ ವೇಳೆ, “ನಾನು ಯಾವುದೇ ಹಂತದಲ್ಲೂ ಇಂದ್ರಾಣಿ ಮುಖರ್ಜಿಯನ್ನು ಭೇಟಿ ಯಾಗಿಲ್ಲ’ ಎಂದು ಕೋರ್ಟ್‌ಗೆ ಚಿದಂಬರಂ ತಿಳಿಸಿದ್ದಾರೆ. ಚಿದು ಪರ ವಾದ ಮಂಡಿಸಿದ ವಕೀಲ ಕಪಿಲ್‌ ಸಿಬಲ್‌, ಈ ಕುರಿತು ಪೀಟರ್‌ ಮುಖರ್ಜಿ ನೀಡಿರುವ ಹೇಳಿಕೆಯನ್ನೂ ಉಲ್ಲೇಖೀಸಿದ್ದು “ವಿತ್ತ ಸಚಿವರನ್ನು ಭೇಟಿಯಾದ ನಿಯೋಗದಲ್ಲಿ ಇಂದ್ರಾಣಿ ಇರಲೇ ಇಲ್ಲ’ ಎಂದು ಸ್ವತಃ ಪೀಟರ್‌ ಅವರೇ ಹೇಳಿಕೆ ನೀಡಿರುವುದನ್ನು ಕೋರ್ಟ್‌ ಗಮನಕ್ಕೆ ತಂದಿದ್ದಾರೆ. ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯ, ಚಿದು ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಕಾಯ್ದಿರಿಸಿತು.

ಅಧಿಕಾರಿಗಳ ತನಿಖೆಗೆ ಅನುಮತಿ
ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಚಿದಂಬರಂ ತನಿಖೆ ಎದುರಿಸುತ್ತಿರುವ ನಡುವೆಯೇ, ಐಎನ್‌ಎಕ್ಸ್‌ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಉತ್ತೇಜನ ಮಂಡಳಿ(ಎಫ್ಐಪಿಬಿ)ಯಿಂದ ಅನುಮತಿ ನೀಡಿದ ಪ್ರಕರಣ ಸಂಬಂಧ ನೀತಿ ಆಯೋಗದ ಮಾಜಿ ಸಿಇಒ ಸಿಂಧುಶ್ರೀ ಖುಲ್ಲರ್‌ ಮತ್ತು ಇತರೆ ಮೂವರು ಮಾಜಿ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಅದರಂತೆ, ಖುಲ್ಲರ್‌ ಮಾತ್ರವಲ್ಲದೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆ ಸಚಿವಾಲಯದ ಮಾಜಿ ಕಾರ್ಯದರ್ಶಿ ಅನೂಪ್‌ ಕೆ.ಪೂಜಾರಿ, ಹಣಕಾಸು ಸಚಿವಾಲಯದ ಅಂದಿನ ನಿರ್ದೇಶಕ ಪ್ರಬೋಧ್‌ ಸಕ್ಸೇನಾ, ಆರ್ಥಿಕ ವ್ಯವಹಾರಗಳ ಇಲಾಖೆಯ ಮಾಜಿ ಕಾರ್ಯದರ್ಶಿ ರಬೀಂದ್ರ ಪ್ರಸಾದ್‌ ಅವರೂ ಸಿಬಿಐನಿಂದ ತನಿಖೆ ಎದುರಿಸಬೇಕಾಗಿದೆ. 2007ರಲ್ಲಿ ವಿದೇಶಗಳಿಂದ ದೇಣಿಗೆ ಪಡೆಯಲು ಐಎನ್‌ಎಕ್ಸ್‌ ಮೀಡಿಯಾಗೆ ಎಫ್ಐಪಿಬಿ ಅನುಮತಿಯನ್ನು ವಿತ್ತ ಸಚಿವಾಲಯ ನೀಡಿತ್ತು. ಆಗ ಚಿದಂಬರಂ ಅವರು ವಿತ್ತ ಸಚಿವರಾಗಿದ್ದರು. ಹೀಗಾಗಿ, ಅನುಮತಿ ನೀಡುವಲ್ಲಿ ಈ ಅಧಿಕಾರಿಗಳ ಪಾತ್ರದ ಕುರಿತು ತನಿಖೆ ನಡೆಯಲಿದೆ.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.