Ex-Army; ನಿವೃತ್ತ ಯೋಧನಿಂದ ಗುಂಡಿಕ್ಕಿ ಅಣ್ಣ, ಆತನ ಮಗನ ಹತ್ಯೆ
ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದ ವೇಳೆ ಘಟನೆ ... ಮಗಳ ಮೇಲೂ ಗುಂಡಿನ ದಾಳಿ
Team Udayavani, Sep 2, 2023, 4:41 PM IST
ಭೋಪಾಲ್: ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದಾಗ ಮಧ್ಯಪ್ರವೇಶಿಸಿದ ನಂತರ ಮಾಜಿ ಸೈನಿಕನೊಬ್ಬ ತನ್ನ ಸಹೋದರ ಮತ್ತು ಆತನ ಪುತ್ರನನ್ನು ಗುಂಡಿಕ್ಕಿ ಕೊಂದಿದ್ದಾನೆ, ಮಗಳನ್ನು ಗಾಯಗೊಳಿಸಿದ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ಲಾಲೇಪುರ ಗ್ರಾಮದಲ್ಲಿ ಶುಕ್ರವಾರ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಆರೋಪಿ ರಾಮಧರ್ ತಿವಾರಿ (50) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸನೋಧಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆರ್ಪಿ ದುಬೆ ತಿಳಿಸಿದ್ದಾರೆ.
ರಾಮಧರ್ ಅವರು ಪತ್ನಿ ಸಂಧ್ಯಾ ಅವರೊಂದಿಗೆ ಜಗಳವಾಡುತ್ತಿದ್ದಾಗ ಅವರ ಅಣ್ಣ ರಾಮಮಿಲನ್ (62) ಮತ್ತು ಅವರ ಪುತ್ರ ಅಜ್ಜು (36) ಅವರನ್ನು ಸಮಾಧಾನಪಡಿಸಲು ಮಧ್ಯಸ್ಥಿಕೆ ವಹಿಸಿದರು. ಆರೋಪಿ ಇಬ್ಬರ ಮೇಲೆ ಗುಂಡು ಹಾರಿಸಿದ್ದು, ಮಗಳು ವರ್ಷಾ (24) ಅವರ ಮೇಲೂ ಗುಂಡು ಹಾರಿಸಿ ಗಾಯಗೊಳಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿಗೆ ನಾಲ್ವರು ಪುತ್ರಿಯರು ಹಾಗೂ ಓರ್ವ ಪುತ್ರನಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಯ ವೇಳೆ ಅವರ ಇಬ್ಬರು ಮಕ್ಕಳು ಶಾಲೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ