
ನಿವೃತ್ತ CJI ಗೋಗೊಯಿ ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ; ಹೊರನಡೆದ ವಿಪಕ್ಷಗಳು
ಸಮಾಜವಾದಿ ಪಕ್ಷವನ್ನು ಹೊರತುಪಡಿಸಿ ಉಳಿದ ಎಲ್ಲಾ ವಿಪಕ್ಷಗಳು ಪ್ರಮಾಣವಚನ ಬಹಿಷ್ಕರಿಸಿ ಹೊರನಡೆದ ಘಟನೆ ನಡೆಯಿತು.
Team Udayavani, Mar 19, 2020, 12:22 PM IST

former Chief Justice
ನವದೆಹಲಿ: ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯಿ ಅವರು ಗುರುವಾರ ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದರು.
ಕಾಂಗ್ರೆಸ್ ಮತ್ತು ಇತರ ವಿಪಕ್ಷಗಳು ಶೇಮ್, ಶೇಮ್ ಎಂದು ಘೋಷಣೆ ಕೂಗುತ್ತಿದ್ದು, ಇದರ ನಡುವೆಯೇ ರಂಜನ್ ಗೋಗೊಯಿ ಪ್ರಮಾಣವಚನ ಸ್ವೀಕರಿಸಿದರು. ಏತನ್ಮಧ್ಯೆ ಸಮಾಜವಾದಿ ಪಕ್ಷವನ್ನು ಹೊರತುಪಡಿಸಿ ಉಳಿದ ಎಲ್ಲಾ ವಿಪಕ್ಷಗಳು ಪ್ರಮಾಣವಚನ ಬಹಿಷ್ಕರಿಸಿ ಹೊರನಡೆದ ಘಟನೆ ನಡೆಯಿತು.
ಮಾಜಿ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ ವಿವಿಧ ರಂಗದಲ್ಲಿ ಸೇವೆ ಸಲ್ಲಿಸಿದ ಗಣ್ಯರು ರಾಜ್ಯಸಭೆಗೆ ಆಯ್ಕೆಯಾಗಿದ್ದ ದೊಡ್ಡ ಸಂಪ್ರದಾಯ ನಮ್ಮದಾಗಿದೆ. ಈ ನಿಟ್ಟಿನಲ್ಲಿ ಜಸ್ಟೀಸ್ ಗೋಗೊಯಿ ಅವರು ಕೂಡಾ ಇಂದು ಪ್ರಮಾಣವಚನ ಸ್ವೀಕರಿಸುವ ಮೂಲಕ ಉತ್ತಮ ಕೊಡುಗೆ ನೀಡಲಿದ್ದಾರೆ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದ ಸದಸ್ಯರು ಕಲಾಪ ಬಹಿಷ್ಕರಿಸಿ ಹೊರನಡೆದಿರುವುದಾಗಿ ವರದಿ ತಿಳಿಸಿದೆ.
ಈ ಸಭೆಗೆ ಆಯ್ಕೆಯಾಗುವವರಿಗೆ ಪ್ರಮಾಣೀಕೃತ ಕಾನೂನು ಮತ್ತು ನಡಾವಳಿಗಳಿವೆ. ಇಂತಹ ಸಂದರ್ಭದಲ್ಲಿ ವಿಪಕ್ಷಗಳ ಈ ಕ್ರಮ ಸೂಕ್ತವಾದುದಲ್ಲ ಎಂದು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅತ್ಯಾಚಾರ ಪ್ರಕರಣ: ಅಸಾರಾಂ ಬಾಪು ದೋಷಿ; ಕೋರ್ಟ್ ತೀರ್ಪು

ಭಾರತ್ ಜೋಡೋ ಯಾತ್ರೆ ಎಲ್ಲಾ ಸಮಾಜ ವಿರೋಧಿ ಅಂಶಗಳನ್ನು ಒಟ್ಟುಗೂಡಿಸಿತು: ಬಿಜೆಪಿ

ಸಲಿಂಗ ವಿವಾಹ : ಅರ್ಜಿಗಳ ಸಮೂಹ ಸುಪ್ರೀಂಗೆ ಸಲ್ಲಿಸಿದ ದೆಹಲಿ ಹೈಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
