ಬಿಜೆಪಿಗೆ ಗುಡ್ ಬೈ…ಗುಜರಾತ್ ಮಾಜಿ ಸಚಿವ ನಾರಾಯಣ್ ವ್ಯಾಸ್ ಕಾಂಗ್ರೆಸ್ ಗೆ ಸೇರ್ಪಡೆ
ವ್ಯಾಸ್ ಗುಜರಾತ್ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
Team Udayavani, Nov 28, 2022, 1:27 PM IST
ಅಹಮದಾಬಾದ್: ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿರುವ ಗುಜರಾತ್ ಮಾಜಿ ಸಚಿವ ಜಯ್ ನಾರಾಯಣ್ ವ್ಯಾಸ್ ಅವರು ಸೋಮವಾರ (ನವೆಂಬರ್ 28) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಇದನ್ನೂ ಓದಿ:ಸಂವಿಧಾನದ ಬಗ್ಗೆ ಸಿದ್ದರಾಮಯ್ಯರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ: ಸಿಎಂ ಬೊಮ್ಮಾಯಿ
ಅಹಮದಾಬಾದ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ವ್ಯಾಸ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ, ಹಿರಿಯ ಮುಖಂಡ ಅಶೋಕ್ ಗೆಹ್ಲೋಟ್ ಅವರು ವ್ಯಾಸ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಸ್ವಾಗತಿಸಿದರು.
ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವ್ಯಾಸ್ ಗುಜರಾತ್ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ನವೆಂಬರ್ 5ರಂದು ವ್ಯಾಸ್ ಬಿಜೆಪಿಗೆ ರಾಜೀನಾಮೆ ನೀಡಿದ್ದರು.
182 ಸ್ಥಾನಗಳನ್ನು ಹೊಂದಿರುವ ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಮೋದಿ ಉತ್ತರಾಧಿಕಾರಿಯಾಗುತ್ತಾರಾ ಯು.ಪಿ ಸಿಎಂ?: ಯೋಗಿ ಆದಿತ್ಯನಾಥ್ ಹೇಳುವುದೇನು?
ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ
ಅಫ್ರಿದಿ ಮಗಳನ್ನು ವರಿಸಿದ ಶಾಹೀನ್ ಅಫ್ರಿದಿ: ಅದ್ಧೂರಿ ವಿವಾಹಕ್ಕೆ ಸಾಕ್ಷಿಯಾದ ಸಹ ಆಟಗಾರರು
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಹಾಕಿ ಕೋಚ್ ಹುದ್ದೆಗೆ ವಿದೇಶಿಯರ ರೇಸ್