ಆರೋಗ್ಯ ತಪಾಸಣೆ: ಮಾಜಿ ಪ್ರಧಾನಿ ವಾಜಪೇಯಿ ಏಮ್ಸ್ ಗೆ ದಾಖಲು
Team Udayavani, Jun 11, 2018, 1:45 PM IST
ನವದೆಹಲಿ: ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93ವರ್ಷ) ಅವರನ್ನು ಸೋಮವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
ದೆಹಲಿ ಏಮ್ಸ್ ನಿರ್ದೇಶಕ ಡಾ.ರಣ್ ದೀಪ್ ಗುಲೇರಿಯಾ ಅವರು ವಾಜಪೇಯಿಯ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ ಎಂದು ವರದಿ ಹೇಳಿದೆ. ಆತಂಕಪಡುವ ಯಾವುದೇ ವಿಷಯ ಇಲ್ಲ, ಇದೊಂದು ನಿಗದಿತ ಆರೋಗ್ಯ ತಪಾಸಣೆಯಾಗಿದೆ ಎಂದು ಎಎನ್ ಐ ವರದಿ ವಿವರಿಸಿದೆ.
ದೇಶದ 10ನೇ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರಾಗಿದ್ದಾರೆ. ಅಷ್ಟೇ ಅಲ್ಲ ವಾಜಪೇಯಿ ಅವರು ಕಾಂಗ್ರೆಸ್ಸೇತರ ಮೊದಲ ಪ್ರಧಾನಿಯಾಗಿ, ಐದು ವರ್ಷಗಳ ಪೂರ್ಣಾವಧಿ ಸರ್ಕಾರ ನಡೆಸಿದ್ದ ಹೆಗ್ಗಳಿಕೆ ಅವರದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ