ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಪೋಟ: ಇಬ್ಬರು ಸಾವು, ನಾಲ್ವರಿಗೆ ಗಾಯ
Team Udayavani, Aug 18, 2020, 8:16 AM IST
ಮುಂಬೈ: ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸ್ಪೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಪಾಲ್ಗಾರ್ ನ ತಾರಾಪುರ್ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಸಂಜೆ ನಡೆದಿದೆ.
ನಂಡೋಲಿಯಾ ಆರ್ಗ್ಯಾನಿಕ್ ಕೆಮಿಕಲ್ಸ್ ಎಂಬಲ್ಲಿ ಸ್ಫೋಟ ನಡೆದಿದೆ. ಸ್ಪೋಟದ ತೀವ್ರತೆ ಎಷ್ಟಿತ್ತೆಂದರೆ ಸ್ಪೋಟದ ಶಬ್ದ 8ರಿಂದ 10 ಕಿ.ಮೀ ದೂರದವರೆಗೆ ಕೇಳಿಸಿದೆ ಎನ್ನಲಾಗಿದೆ.
ಘಟನೆಯ ಆರಂಭದಲ್ಲಿ ಓರ್ವ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು ಎಂದು ಪಾಲ್ಗಾರ್ ಜಿಲ್ಲಾಧಿಕಾರಿ ಕೈಲಾಸ್ ಶಿಂಧೆ ಹೇಳಿದ್ದರು. ಆದರೆ ನಂತರ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
Maharashtra: Fire breaks out at Nandolia Organic Chemicals in Palghar. More details awaited. pic.twitter.com/Qurd40Nnc2
— ANI (@ANI) August 17, 2020