ಫೇಸ್ಬುಕ್ ಸಂಸ್ಥೆಗೆ ಸಂಸದೀಯ ಸಮಿತಿ ತರಾಟೆ
Team Udayavani, Mar 7, 2019, 12:30 AM IST
ಹೊಸದಿಲ್ಲಿ: ಚುನಾವಣೆ ಸಮಯದಲ್ಲಿ ಫೇಸ್ಬುಕ್ ಅನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯುವ ಸಾಮರ್ಥ್ಯವಿಲ್ಲ ಎಂಬ ಕಾರಣಕ್ಕೆ ಫೇಸ್ಬುಕ್ಗೆ ಸಂಸದೀಯ ಸಮಿತಿ ತರಾಟೆಗೆ ತೆಗೆದುಕೊಂಡಿದೆ. ಈ ಸಂಬಂಧ ಲಿಖಿತವಾಗಿ ವಿವರಣೆ ನೀಡುವಂತೆಯೂ ಸೂಚಿಸಲಾಗಿದೆ. ಇತ್ತೀಚೆಗಷ್ಟೇ ಟ್ವಿಟರ್ ಅಧಿಕಾರಿಗಳನ್ನೂ ಸಂಸದೀಯ ಸಮಿತಿ ವಿಚಾರಣೆ ನಡೆಸಿತ್ತು. ಬುಧವಾರ ಫೇಸ್ಬುಕ್ನ ಜಾಗತಿಕ ಸಾರ್ವಜನಿಕ ನೀತಿ ವಿಭಾಗದ ಉಪಾಧ್ಯಕ್ಷ ಜೋಯೆಲ್ ಕಪ್ಲಾನ್ರನ್ನು ವಿಚಾರಣೆ ನಡೆಸಿದ ಬಿಜೆಪಿ ಸಂಸದ ಅನುರಾಗ್ ಥಾಕೂರ್ ನೇತೃತ್ವದ ಸಂಸದೀಯ ಸಮಿತಿ ತರಾಟೆಗೆ ತೆಗೆದುಕೊಂಡಿದೆ. ಅಷ್ಟೇ ಅಲ್ಲ, ಫೇಸ್ಬುಕ್ನ ಕೆಲವು ಉದ್ಯೋಗಿಗಳು ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪೋಸ್ಟ್ ಮಾಡಿದ ಹೇಳಿಕೆಗಳಿಗೂ ಜೋಯೆಲ್ ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ.
ಕಂಟೆಂಟ್ಗಳ ಮೇಲೆ ವಿಚಕ್ಷಣೆ ನಡೆಸುವುದಕ್ಕೆ ಸಂಬಂಧಿಸಿದಂತೆ ತಪ್ಪನ್ನು ಫೇಸ್ಬುಕ್ ಒಪ್ಪಿಕೊಂಡಿದೆ. ಫೇಸ್ಬುಕ್ನಲ್ಲಿ ಪ್ರಕಟವಾಗುವ ಪೋಸ್ಟ್ಗಳನ್ನು ಸಂಕೀರ್ಣವಾಗಿ ವಿಶ್ಲೇಷಿಸಲು ಒಲವು ತೋರುತ್ತಿಲ್ಲ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?