ಸುಳ್ಳು ಸುದ್ದಿ ಹಬ್ಬಿಸಿದ ಆರೋಪ: ಜಾಕ್ ಮಾ ವಿರುದ್ಧ ನೋಟಿಸ್
Team Udayavani, Jul 27, 2020, 9:07 AM IST
ಹೊಸದಿಲ್ಲಿ: ಭಾರತದ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಹೊಸದಿಲ್ಲಿಯ ಸಿವಿಲ್ ನ್ಯಾಯಾಲಯ, ಚೀನದ ಅತಿ ದೊಡ್ಡ ಶ್ರೀಮಂತ ಉದ್ಯಮಿ ಹಾಗೂ ಅಲಿಬಾಬಾ ಕಂಪನಿಯ ಒಡೆಯ ಜ್ಯಾಕ್ ಮಾ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಚೀನದ ಅಂತರ್ಜಾಲ ಬ್ರೌಸರ್ ಆದ ಯುಸಿ ಬ್ರೌಸರ್ ಸಂಸ್ಥೆ ಈ ಹಿಂದೆ ಭಾರತದಲ್ಲಿಯೂ ಸೇವೆ ನೀಡುತ್ತಿದ್ದು, ಆ ಕಂಪನಿಯ ಮಾಜಿ ಉದ್ಯೋಗಿ ಪುಷ್ಪೇಂದ್ರ ಸಿಂಗ್ ಪರಮಾರ್ ಎಂಬುವರು ನ್ಯಾಯಾ ಲಯದ ಮೊರೆ ಹೋಗಿದ್ದಾರೆ. ಯು.ಸಿ. ಬ್ರೌಸರ್ನಲ್ಲಿ ಚೀನದ ಘಾಸಿಯಾಗುವಂಥ ಮಾಹಿತಿಗಳನ್ನು ಸೆನ್ಸಾರ್ ಮಾಡಲಾಗುತ್ತಿತ್ತು. ಅದಲ್ಲದೆ, ಭಾರತದ ವಿರುದ್ಧ ಸುಳ್ಳು ವದಂತಿಗಳಿಗೆ ಬ್ರೌಸರ್ನಡಿ ಓದಲು ಅವಕಾಶ ಕಲ್ಪಿಸಲಾಗಿತ್ತು ಎಂದು ಸಿಂಗ್ ಅವರು, ಜು. 20ರಂದು ನ್ಯಾಯಾಲಯದಲ್ಲಿ ದಾಖ ಲಿಸಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಹಾಗಾಗಿ, ಯು.ಸಿ. ಬ್ರೌಸರ್ ಒಡೆತನ ಹೊಂದಿರುವ ಜ್ಯಾಕ್ ಮಾ ಅವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್